ಜ್ಞಾನವಾಪಿಯಲ್ಲಿ ಮೂರ್ತಿಗಳ ಪೂಜೆಗೆ ತಡೆ ಕೋರಿ ಅರ್ಜಿ: ಸುಪ್ರೀಂ ಕೋರ್ಟ್ ನಲ್ಲಿ ಮಸೀದಿ ಸಮಿತಿಗೆ ಹಿನ್ನೆಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜ್ಞಾನವಾಪಿ ಮಸೀದಿಯಲ್ಲಿರುವ ಹಿಂದು ಮೂರ್ತಿಗಳಿಗೆ ಕಳೆದ 31 ವರ್ಷಗಳಿಂದ ಸ್ಥಗಿತಗೊಂಡಿದ್ದ ಪೂಜೆ ಇದೀಗ ಶುರುವಾಗಿದೆ . ವಾರಣಾಸಿ ಜಿಲ್ಲಾ ನ್ಯಾಯಾಲಯ ನಿನ್ನೆ(ಜ.31) ಈ ಕುರಿತು ಮಹತ್ವದ ಆದೇಶ ನೀಡಿತ್ತು. ನೆಲಮಹಡಿಯಲ್ಲಿರುವ ಮೂರ್ತಿಗಳ ಪೂಜೆಗೆ ಹಿಂದುಗಳಿಗೆ ಅವಕಾಶ ಮಾಡಿಕೊಟ್ಟಿತ್ತು.

ಇದೀಗ ಈ ಆದೇಶವನ್ನು ಪ್ರಶ್ನಿಸಿ ಮಸೀದಿ ಮುಸ್ಲಿಂ ಸಮತಿ ಸುಪ್ರೀಂ ಕೋರ್ಟ್ ಕದ ತಟ್ಟಿತ್ತು. ಆದರೆ ಮುಸ್ಲಿಂ ಸಮಿತಿಗೆ ತೀವ್ರ ಹಿನ್ನಡೆಯಾಗಿದೆ. ಮುಸ್ಲಿಂ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ಮೊರೆ ಹೊಗುವಂತೆ ಸೂಚಿಸಿದೆ.

ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿರುವ ‘ವ್ಯಾಸ್‌ ಕೆ ಠಿಖಾನಾ’ದಲ್ಲಿನ ಶೃಂಗಾರ ಗೌರಿ ಹಾಗೂ ಇತರ ವಿಗ್ರಹಗಳನ್ನು ಪೂಜಿಸಲು ಹಿಂದುಗಳಿಗೆ ವಾರಾಣಸಿ ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿತ್ತು. ಈ ಅನುಮತಿ ಸಿಕ್ಕ ಬೆನ್ನಲ್ಲೇ ಮೂರ್ತಿಗಳಿಗೆ ಆರತಿ ಮಾಡಿ ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸಲಾಗಿದೆ. ಕಾಶಿ ವಿಶ್ವನಾಥ ಮಂದಿರದ ಅರ್ಚರು ಮೂರ್ತಿಗಳಿಗೆ ಪೂಜೆ ಸಲ್ಲಿಸಿದ ವಿಡಿಯೋ ಬಾರಿ ವೈರಲ್ ಆಗಿದೆ.

ವಾರಣಾಸಿ ಕೋರ್ಟ್ ಹಿಂದುಗಳಿಗೆ ಪೂಜೆಗೆ ಅನುಮತಿ ನೀಡುತ್ತಿದ್ದಂತೆ ಜ್ಞಾನವಾಪಿ ಮುಸ್ಲಿಂ ಸಮಿತಿ ಅಸಮಾಧಾನ ಹೊರಹಾಕಿದ್ದು, ಅಂಜುಮಾನ್ ಇಂತೆಜಮಿಯಾ ಮಸೀದಿ ಸಮಿತಿ ಸುಪ್ರೀಂ ಕೋರ್ಟ್‌ನಲ್ಲಿ ತುರ್ತು ಅರ್ಚಿ ವಿಚಾರಣೆಗೆ ಕೋರಿತ್ತು. ಅರ್ಜಿಯಲ್ಲಿ ಯಥಾ ಸ್ಥಿತಿ ಕಾಪಾಡಬೇಕು ಎಂದು ಮನವಿ ಮಾಡಿತ್ತು.

ಇಂದು ಬೆಳಗ್ಗೆ ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಇಷ್ಟೇ ಅಲ್ಲ ವಾರಣಾಸಿ ಜಿಲ್ಲಾ ನ್ಯಾಯಾಲಯ ನೀಡಿದ ಆದೇಶವನ್ನು ಮೊದಲು ಹೈಕೋರ್ಟ್‌ನಲ್ಲಿ ಪ್ರಶ್ನಿಸುವಂತೆ ಮಸೀದಿ ಸಮಿತಿಗೆ ಸೂಚನೆ ನೀಡಿದೆ.
ಈ ಸೂಚನೆ ಬೆನ್ನಲ್ಲೇ ಅಲಹಾಬಾದ್ ಹೈಕೋರ್ಟ್‌ನಲ್ಲಿ ವಾರಣಾಸಿ ಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಕೆಯಾಗಿದೆ. ತುರ್ತು ಅರ್ಜಿ ವಿಚಾರಣೆ ನಡೆಸುವಂತೆ ಮುಸ್ಲಿಂ ಸಮಿತಿ ಕೋರಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!