ಗ್ಯಾನವಾಪಿಯ ವಝುಖಾನ ಸ್ಥಳ ಸರ್ವೆಗೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಶಿ ವಿಶ್ವನಾಥ ಮಂದಿರದ ಆವರಣದಲ್ಲಿರುವ ಗ್ಯಾನವಾಪಿ ಮಸೀದಿ ಸರ್ವೆ ವರದಿ ಬಹಿರಂಗಗೊಂಡ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ಗೆ ಮತ್ತೊಂದು ಅರ್ಜಿ ಸಲ್ಲಿಕೆಯಾಗಿದೆ.

ಗ್ಯಾನವಾಪಿ ಮಸೀದಿಯಲ್ಲಿ ಮುಸ್ಲಿಮರು ವಝುಖಾನ ಆಗಿ ಬಳಕೆ ಮಾಡುತ್ತಿದ ಸ್ಥಳ ಹಾಗೂ ಪತ್ತೆಯಾಗಿರುವ ಶಿವಲಿಂಗದ ಕುರಿತು ಭಾರತೀಯ ಪುರಾತತ್ವ ಇಲಾಖೆಯಿಂದ ಸುದೀರ್ಘ ಸಮೀಕ್ಷೆ ನಡೆಸಬೇಕು. ಇದಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಬೇಕು ಎಂದು ಅರ್ಜಿ ಸಲ್ಲಿಕೆಯಾಗಿದೆ.

ಮೆ 19, 2023ರಲ್ಲಿ ಸುಪ್ರೀಂ ಕೋರ್ಟ್, ಶಿವಲಿಂಗ ಪತ್ತೆಯಾದ ಸ್ಥಳ ಸರ್ವೆಗೆ ತಡೆ ನೀಡಿತ್ತು. ಈ ತಡೆಯನ್ನು ತೆರವುಗೊಳಿಸಿ ಸರ್ವೆಗೆ ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಗ್ಯಾನವಾಪಿ ಮಸೀದಿ ಕುರಿತು ಪುರಾತತ್ವ ಇಲಾಖೆ ಸಮೀಕ್ಷಾ ವರದಿಯಲ್ಲಿ ಕೆಲ ಮಹತ್ವದ ಅಂಶಗಳನ್ನು ಉಲ್ಲೇಖಿಸಿದೆ. ಇದು ಕಾಶಿ ವಿಶ್ವನಾಥ ಮಂದಿರ ಧ್ವಂಸಗೊಳಿಸಿ ನಿರ್ಮಾಣ ಮಾಡಲಾಗಿದೆ ಅನ್ನೋದನ್ನು ಸ್ಪಷ್ಟಪಡಿಸಿದೆ. 17ನೇ ಶತಮಾನದಲ್ಲಿ ಔರಂಗಾಜೇಬ್‌ ಕಾಲದಲ್ಲಿ ದೇಗುಲವನ್ನು ಧ್ವಂಸಗೊಳಿಸಿ ಮಸೀದಿ ನಿರ್ಮಿಸಲಾಗಿದೆ ಅನ್ನೋದನ್ನು ದಾಖಲೆ ಸಮೇತ ನೀಡಿದೆ. ಮಸೀದಿಯ ಪಶ್ಚಿಮ ಭಾಗದ ಗೋಡೆ ದೇಗುಲಕ್ಕೆ ಸೇರಿದ್ದು. ಹಾಲಿ ಇರುವ ಮಸೀದಿ ಸಮುಚ್ಚಯದ ಕೆಳಗೆ ಬೃಹತ್‌ ಹಿಂದೂ ಮಂದಿರದ ಕುರುಹುಗಳು ಸಿಕ್ಕಿವೆ. ಹಳೆಯ ಕಟ್ಟಡದ ಮೇಲೆ ಈಗಿನ ಕಟ್ಟಡವನ್ನು ನಿರ್ಮಿಸಲಾಗಿದೆ. ಹಳೆಯ ಕಟ್ಟಡದ ಕಂಬಗಳನ್ನೇ ಬಳಸಿಕೊಳ್ಳಲಾಗಿದೆ. ಕೆಲವೊಂದು ಕಡೆ ಹಿಂದೂ ದೇಗುಲದ ಕಂಬಗಳಿಗೆ ಬದಲಾವಣೆ ಮಾಡುವ ಮೂಲಕ ಹೊಸ ಕಟ್ಟಡ ನಿರ್ಮಿಸಲಾಗಿದೆ. ಕೆಲವೊಂದು ಕಡೆ ಕಂಬದ ಮೇಲಿನ ಕೆತ್ತನೆಗಳನ್ನು ಅಳಿಸಿ ಹಾಕುವ ಪ್ರಯತ್ನಗಳನ್ನೂ ಮಾಡಲಾಗಿದೆ ಎಂದು ಉಲ್ಲೇಖ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!