ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿರುವ ತಮಿಳುನಾಡು ಸಚಿವ ಹಾಗೂ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ನಾನು ಸನಾತನ ಧರ್ಮದ ಅನುಯಾಯಿಯಾಗಿದ್ದು, ಉದಯನಿಧಿ ಸ್ಟಾಲಿನ್ ಮಾಡಿರುವ ‘ದ್ವೇಷ ಭಾಷಣ’ದಿಂದ ನೊಂದಿದ್ದೇನೆ ಎಂದು ವಕೀಲ ವಿನೀತ್ ಜಿಂದಾಲ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಡಿಎಂಕೆ ನಾಯಕನ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದೇನೆ. ಆದರೆ, ಈವರೆಗೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ವಕೀಲ ಆರ್.ಕೆ. ಚೌಧರಿ ಅವರ ಮೂಲಕ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸದ ದೆಹಲಿ ಪೊಲೀಸರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಕೋರಲಾಗಿದೆ.