ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ರಾಜಭವನದ ಎದುರು ಪೆಟ್ರೋಲ್ ಬಾಂಬ್ ದಾಳಿ ನಡೆದಿದ್ದು, ಪೆಟ್ರೋಲ್ ಬಾಂಬ್ ಎಸೆಯಲು ಯತ್ನಿಸಿದ ಖ್ಯಾತ ರೌಡಿ ಕರುಕ್ಕ ವಿನೋದ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಪೆಟ್ರೋಲ್ ಬಾಂಬ್ ಎಸೆದ ವ್ಯಕ್ತಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿ ಕರುಕ್ಕ ವಿನೋದ್ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆತನಿಂದ ಇನ್ನೂ 3 ಪೆಟ್ರೋಲ್ ಬಾಂಬ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ರಾಜ್ಯಪಾಲರ ಭವನದ ಮುಂದೆ ಪೆಟ್ರೋಲ್ ಬಾಂಬ್ ಎಸೆದಿದ್ದು ಏಕೆ, ಇದರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ಈ ವಿಷಯವನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿದ್ದಾರೆ. ರಾಜ್ಯದಲ್ಲಿ ಅಪರಾಧ ನಿಯಂತ್ರಣ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಡಿಎಂಕೆ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದರು.