ಮೇಘಾಲಯ ಡಿಸಿಎಂ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ: ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶುಕ್ರವಾರ, ಅಪರಿಚಿತ ದುಷ್ಕರ್ಮಿಗಳು ಪೂರ್ವ ಖಾಸಿ ಹಿಲ್ಸ್‌ನ ನೊಂಗ್‌ಮೆನ್‌ಸಾಂಗ್ ಪ್ರದೇಶದಲ್ಲಿ ಉಪ ಮುಖ್ಯಮಂತ್ರಿ ಸ್ನಿಯಾವ್‌ಭಾಲಾಂಗ್ ಧರ್ ಅವರ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ.

ವಸ್ತುವು ಪೆಟ್ರೋಲ್ ಬಾಂಬ್ ಆಗಿದೆಯೇ ಎಂದು ನಾವು ಇನ್ನೂ ನಿರ್ಧರಿಸುತ್ತಿದ್ದೇವೆ. ಹೆಚ್ಚಿನ ವಿವರಗಳು ತಿಳಿದ ನಂತರ ನಾವು ಸ್ಪಷ್ಟೀಕರಣವನ್ನು ನೀಡುತ್ತೇವೆ ಎಂದು ಪೂರ್ವ ಖಾಸಿ ಹಿಲ್ಸ್ ಎಸ್ಪಿ ರಿತುರಾಜ್ ರವಿ ಹೇಳಿದ್ದಾರೆ.

ಡಿಸಿಎಂ ಮನೆಯಲ್ಲಿ ಲಭ್ಯವಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಬಾಂಬ್ ತರಹದ ವಸ್ತುವನ್ನು ಯಾವಾಗ ಎಸೆದರು ಎಂಬುದನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಅದರಂತೆ ಉಪ ಮುಖ್ಯಮಂತ್ರಿ ನಿವಾಸ ಹಾಗೂ ನಗರದ ಎಲ್ಲ ಪ್ರಮುಖ ಪ್ರದೇಶಗಳಲ್ಲಿ ಭದ್ರತೆಯನ್ನು ಬಲಪಡಿಸಲಾಗಿದೆ. ದಾಳಿಗೆ ಕಾರಣರಾದ ಯಾರನ್ನೂ ಬಿಡುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!