Monday, July 4, 2022

Latest Posts

ಪೆಟ್ರೋಲ್ ಬಂಕ್ ಮುಂಭಾಗ ಕಾಣಿಸಿತು ‘100-ನಾಟೌಟ್’ ಪ್ರತಿಭಟನೆ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ಧ ಇಂದು ಕಾಂಗ್ರೆಸ್ ದೇಶಾದ್ಯಂತ ಸಾಂಕೇತಿಕ ಪ್ರತಿಭಟನೆ ನಡೆಸುತ್ತಿದೆ.

ಈ ಬಗ್ಗೆ ಸಿದ್ದರಾಮಯ್ಯು ಮಾತನಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿರಂತರವಾಗಿ ಏರಿಸುವ ಮೂಲಕ ಕೊರೋನಾದಿಂದ ಸಂಕಷ್ಟದಲ್ಲಿರುವ ಜನರ ಗಾಯದ ಮೇಲೆ ಕೇಂದ್ರ ಸರ್ಕಾರ ಬರೆ ಹಾಕುತ್ತಿದೆ. ಈ ಹಿನ್ನೆಲೆ  ಕೇಂದ್ರ ಸರ್ಕಾರದ ವಿರುದ್ಧ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೆಂಗಳೂರಿನ ಶಿವಾನಂದ ವೃತ್ತದ ಪೆಟ್ರೋಲ್ ಬಂಕ್ ಮುಂಭಾಗ 100-ನಾಟೌಟ್ ಹೆಸರಿನಲ್ಲಿ ಪ್ರತಿಭಟನೆ ನಡೆಸಿರುವುದಾಗಿ ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾಜಿ ಸಚಿವ ಆರ್. ವಿ. ದೇಶಪಾಂಡೆ ಸೇರಿದಂತೆ ಹಲವು ಮುಖಂಡರು  ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss