ಹೊಸದಿಗಂತ ಡಿಜಿಟಲ್ ಡೆಸ್ಕ್:
ತಾಂತ್ರಿಕ ಸವಾಲುಗಳು ಮತ್ತು ಸಂಕೀರ್ಣ ವ್ಯವಸ್ಥೆಗಳಿಂದಾಗಿ ಹಳೆಯ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ ಕಾರ್ಯಸಾಧ್ಯವಲ್ಲ ಎಂದು ದೆಹಲಿ ಸರ್ಕಾರ ವಾಯು ಗುಣಮಟ್ಟ ನಿರ್ವಹಣಾ ಆಯೋಗಕ್ಕೆ ಪತ್ರ ಬರೆದಿದೆ.
ದೆಹಲಿ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಮಾತನಾಡಿ, ಈ ಕ್ರಮದ ಬಗ್ಗೆ ಜನರಲ್ಲಿ ಅಸಮಾಧಾನವಿದೆ ಮತ್ತು ಸರ್ಕಾರ ಅವರೊಂದಿಗೆ ನಿಂತಿದೆ ಎಂದು ಹೇಳಿದರು.
ರಾಷ್ಟ್ರ ರಾಜಧಾನಿ ಪ್ರದೇಶದಾದ್ಯಂತ ನಿಷೇಧವನ್ನು ಜಾರಿಗೆ ತರಬೇಕೆಂದು ಸರ್ಕಾರ ಸೂಚಿಸಿದೆ. ಆದರೆ ಹಳೆಯ ವಾಹನಗಳಿಗೆ ಕಠಿಣ ಮಾನದಂಡಗಳನ್ನು ನಿಗದಿಪಡಿಸಿದ್ದಕ್ಕಾಗಿ ಹಿಂದಿನ ಆಪ್ ಆಡಳಿತವನ್ನು ಅವರು ಟೀಕಿಸಿದರು.
ಜುಲೈ 1 ರಿಂದ ದೆಹಲಿ ಸರ್ಕಾರವು, ನೋಂದಣಿ ರದ್ದುಪಡಿಸಲಾದ ಮತ್ತು ನ್ಯಾಯಾಲಯದ ಆದೇಶದ ಪ್ರಕಾರ ರಸ್ತೆಗಳಲ್ಲಿ ಓಡಾಡಲು ಅನುಮತಿಸದ – ಡೀಸೆಲ್ ವಾಹನಗಳಿಗೆ 10 ವರ್ಷ ಅಥವಾ ಅದಕ್ಕಿಂತ ಹೆಚ್ಚು ಮತ್ತು ಪೆಟ್ರೋಲ್ ವಾಹನಗಳಿಗೆ 15 ವರ್ಷ ಅಥವಾ ಅದಕ್ಕಿಂತ ಹಳೆಯ ವಾಹನಗಳಿಗೆ ಇಂಧನ ನಿಷೇಧಿಸಲಾಗಿದೆ.