ಪೆಟ್ರೋಲ್‌ – ಡೀಸೆಲ್‌ ಬೆಲೆ ಇಳಿಕೆಯಾಗುತ್ತಾ?: ಕೇಂದ್ರ ಸಚಿವ ಹರ್ದೀಪ್‌ ಸಿಂಗ್‌ ಪುರಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಸ್ಥಿರವಾಗಿದ್ದರೆ ಪೆಟ್ರೋಲ್‌ ಮತ್ತು ಡೀಸೆಲ್‌ (Petrol Diesel Price) ಬೆಲೆ ಇಳಿಕೆ ಮಾಡಬಹುದು ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ (Hardeep Singh Puri) ಹೇಳಿದ್ದಾರೆ.

ಪ್ರಧಾನಿ ಮೋದಿ (Narendra Modi) ನೇತೃತ್ವದ ಸರ್ಕಾರವು 2022ರ ಏಪ್ರಿಲ್‌ನಿಂದ ತೈಲ ಬೆಲೆಯಲ್ಲಿ ಯಾವುದೇ ಏರಿಕೆಯಾಗದಂತೆ ನೋಡಿಕೊಂಡಿದೆ. ಆ ಮೂಲಕ ಗ್ರಾಹಕರಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಕ್ರಮಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಮೋದಿ ಸರ್ಕಾರದ ಒಂಬತ್ತು ವರ್ಷ ಪೂರೈಸಿರುವ ಕುರಿತು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಫೇಲ್ ಮತ್ತು ಇತರ ವಿಷಯಗಳ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗಳಿಗಾಗಿ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ನಾಯಕರ ಹೇಳಿಕೆಗಳು ಸುಳ್ಳು ಎಂದು ಈಗಾಗಲೇ ಸಾಬೀತಾಗಿದೆ ಎಂದು ಮಾತನಾಡಿದ್ದಾರೆ.

ಬೆಲೆ ನಿಗದಿ ವಿಷಯವು ಕ್ರಿಯಾತ್ಮಕ ವಿಷಯವಾಗಿದೆ. ಸರ್ಕಾರವು ತನ್ನ ಒಂಬತ್ತು ವರ್ಷಗಳ ಅವಧಿಯಲ್ಲಿ ಜನರಿಗೆ ಸಹಾಯ ಮಾಡಲು ಹಲವಾರು ಕಲ್ಯಾಣ ಕ್ರಮಗಳನ್ನು ಕೈಗೊಂಡಿದೆ. ಬಿಜೆಪಿಯೇತರ ರಾಜ್ಯ ಸರ್ಕಾರಗಳು ವ್ಯಾಟ್ ಅನ್ನು ಕಡಿಮೆ ಮಾಡದೇ ಬಿಜೆಪಿ ಆಡಳಿತವಿರುವ ಸರ್ಕಾರಗಳಿಗಿಂತ ಹೆಚ್ಚಿನ ಬೆಲೆಗೆ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಮಾರಾಟ ಮಾಡುತ್ತಿವೆ. ಆದರೂ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!