ಪೆಟ್ರೋಲ್, ಡೀಸೆಲ್ ದರ ಏರಿಕೆ: ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮಾಡಿ ವಾಹನ ಸವಾರರಿಗೆ ಶಾಕ್ ನೀಡಿದೆ.

ಸರ್ಕಾರದ ಈ‌ ನಿರ್ಧಾರವನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಟೀಕಿಸಿದ್ದು, ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ. ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ಸಿ.ಟಿ ರವಿ ಕೂಡ ಸರಕಾರದ ನಿರ್ಧಾರವನ್ನು ಟೀಕಿಸಿದ್ದು, ಪೆಟ್ರೋಲ್, ಡೀಸೆಲ್‌ ಮೇಲೆ ಸೆಸ್ ವಿಧಿಸಿದ ಜನ ವಿರೋಧಿ, ಬಡವರ ವಿರೋಧಿ ಸರ್ಕಾರ. ಉಚಿತ ಉಚಿತ ಉಚಿತ ಎಂದು ರಾಜ್ಯದ ಜನರ ಮುಂಗೈಗೆ ತುಪ್ಪ ಹಚ್ಚುತ್ತಾ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಕಳೆದ ಒಂದು ವರ್ಷದ ಅಧಿಕಾರಾವಧಿಯಲ್ಲಿ ಎರಡಕ್ಕೂ ಹೆಚ್ಚು ಬಾರಿ ಪೆಟ್ರೋಲ್ ಮೇಲಿನ ಸೆಸ್ ಜಾಸ್ತಿ ಮಾಡಿದೆ.ರಾಜ್ಯದಲ್ಲಿ ಇಂದಿನಿಂದ ಪೆಟ್ರೋಲ್ ಬೆಲೆ ಸರಾಸರಿ ಮೂರೂ ರೂಪಾಯಿ ಹಾಗೂ ಡಿಸೇಲ್ ಬೆಲೆ ಸರಾಸರಿ ಮೂರುವರೆ ರೂಪಾಯಿಯಷ್ಟು ಜಾಸ್ತಿ ಮಾಡಿದೆ. ʻನಾನು ಬಡವರ ಪರʼ ಎಂದು ಬೊಬ್ಬೆ ಹೊಡೆಯುವ ಮುಖ್ಯಮಂತ್ರಿಯವರೇ ಇದೆ ಏನು ನಿಮ್ಮ ಬಡವರ ಪರ ನೀತಿ? ನಾಚಿಕೆಯಾಗಬೇಕು ನಿಮ್ಮ ಜನ ವಿರೋಧಿ ಸರ್ಕಾರಕ್ಕೆ, ನಾಚಿಕೆಯಾಗಬೇಕು ನಿಮ್ಮ ಕಾಂಗ್ರೆಸ್ ಪಕ್ಷಕ್ಕೆ ಎಂದು ಕಟುವಾಗಿ ದಾಳಿ ನಡೆಸಿದ್ದಾರೆ.

ರಾಜ್ಯ ಬಿಜೆಪಿ ಘಟಕ
ಕನ್ನಡಿಗರಿಗೆ ಪದೇ ಪದೇ ಬೆಲೆ ಏರಿಕೆಯ ಬರೆ ಹಾಕುವುದೇ ಕಾಂಗ್ರೆಸ್‌ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್. ಪೆಟ್ರೋಲ್‌ ಬೆಲೆ ಪ್ರತಿ ಲೀ. ಗೆ 3 ರೂ. ಹಾಗೂ ಡೀಸೆಲ್‌ ಬೆಲೆ ಪ್ರತಿ ಲೀ.ಗೆ 3.50 ರೂ. ಅನ್ನು ಏಕಾಏಕಿ ಹೆಚ್ಚಿಸಿದೆ ರಾಜ್ಯ ಕಾಂಗ್ರೆಸ್‌ ಸರ್ಕಾರ. ಸಿಎಂ ಸಿದ್ದರಾಮಯ್ಯ ಅವರೇ, ಪೆಟ್ರೋಲಿಯಂ ಕಚ್ಚಾತೈಲದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ, ಮೇಲಾಗಿ ನೀವೇ ಹೇಳಿದಂತೆ ಸರ್ಕಾರದ ಬೊಕ್ಕಸ ತುಂಬಿ ತುಳುಕುತ್ತಿದೆ, ಕರ್ನಾಟಕ ದಿವಾಳಿ ಸಹ ಆಗಿಲ್ಲ, ಅಂದ ಮೇಲೆ ದಿಢೀರ್‌ ಅಂತ ಈ ಬೆಲೆ ಏರಿಕೆ ಯಾವ ಪುರುಷಾರ್ಥಕ್ಕೆ? ನಿಮಗೆ ನಿಜಕ್ಕೂ ಬಡವರ ಮೇಲೆ ಕಾಳಜಿ ಇದ್ದರೆ, ಕೂಡಲೇ ಬೆಲೆ ಏರಿಕೆ ಆದೇಶವನ್ನು ಹಿಂಪಡೆಯಿರಿ, ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಎದುರಿಸಲು ಸಿದ್ದವಾಗಿ ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದೆ.

ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ ಮತ್ತು ಡೀಸೆಲ್‌ ಬೆಲೆ 3.50 ರೂ. ಹೆಚ್ಚಳ ಮಾಡಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!