Thursday, August 18, 2022

Latest Posts

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಮುಖ್ಯಮಂತ್ರಿಗೆ ಘೇರಾವ್: ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಹೊಸ ದಿಗಂತ ವರದಿ, ಶಿವಮೊಗ್ಗ :

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಘೇರಾವ್ ಹಾಕಲು ಮುಂದಾಗಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಭಾನುವಾರ ಪೊಲೀಸರು ಬಂಧಿಸಿದರು.
ಪಕ್ಷದ ಕಚೇರಿಯಲ್ಲಿದ್ದ ಜಿಲ್ಲಾಧ್ಯಕ್ಷ ಎಚ್.ಎಸ್. ಸುಂದರೇಶ್ ಸೇರಿದಂತೆ ಕೆಲವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಿದರೆ, ವಿನೋಬನಗರದ ಶಿವಾಲಯ ಬಳಿ ಪ್ರತಿಭಟನೆಗೆ ಸಿದ್ಧವಾಗಿದ್ದ ಶ್ರೀನಿವಾಸ್ ಕರಿಯಣ್ಣ, ಚಂದ್ರಶೇಖರ್, ಸುವರ್ಣ ನಾಗರಾಜ್ ಸೇರಿದಂತೆ ಹಲವರನ್ನು ಬಂಧಿಸಲಾಯಿತು.
ಬಂಧಿತರೆಲ್ಲರನ್ನು ಡಿಎಆರ್ ಮೈದಾನದಲ್ಲಿಟ್ಟು, ರಾತ್ರಿ ಬಿಡುಗಡೆ ಮಾಡಲಾಯಿತು. ನಮ್ಮಿಲುಮೆ ಕಾರ್ಯಕ್ರಮಕ್ಕೆ ತೆರಳುವ ಮುಖ್ಯಮಂತ್ರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದೆಂದು ಜಿಲ್ಲಾ ಕಾಂಗ್ರೆಸ್ ಘೋಷಿಸಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!