ಪೆಟ್ರೋಲ್, ಡೀಸೆಲ್ ದರ ಏರಿಕೆ: ನಾಳೆ ರಾಜ್ಯ ಸರಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ದರ ಹೆಚ್ಚಿಸಿದ್ದನ್ನು ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸಿದ್ದುನಾಳೆ ಜೆಡಿಎಸ್ ಪಕ್ಷದಿಂದ ಪ್ರತಿಭಟನೆ ನಿರ್ಧಾರ ಕೈಗೊಳ್ಳಲಾಗಿದೆ.

ಈ ಬಗ್ಗೆ ಜೆಡಿಎಸ್ ಪಕ್ಷದಿಂದ ಮಾಹಿತಿ ನೀಡಲಾಗಿದ್ದು, ನಾಳೆ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದೆ.

ನಾಳೆ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜೆಡಿಎಸ್ ಮುಖಂಡರು ಪ್ರತಿಭಟನೆ ನಡೆಸಲಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!