ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ದಿನದಿಂದ ದಿನಕ್ಕೆ ತೈಲೋತ್ಪನ್ನಗಳ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ಮತ್ತೆ ಪೆಟ್ರೋಲ್ ಡೀಸೆಲ್ ದರ ಗಗನಕ್ಕೇರಿದೆ. ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 25 ಪೈಸೆ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ದರ 92.05 ರೂ.ಗೆ ಏರಿಕೆಯಾಗಿದ್ದು, ಡಿಸೇಲ್ ದರ 82.61 ರೂ.ಗೆ ಏರಿಕೆಯಾಗಿದೆ. ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 98.36 ರೂ.ಗೆ ಏರಿಕೆಯಾಗಿದ್ದು, ಡೀಸೆಲ್ ದರ ಪ್ರತೀ ಲೀಟರ್ ಡೀಸೆಲ್ ದರ 89.75 ರೂ. ಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 95.17 ರೂ. ಗೆ ಏರಿಕೆಯಾಗಿದೆ. ಪ್ರತೀ ಲೀಟರ್ ಡೀಸೆಲ್ ದರ 87.63 ರೂ. ಗೆ ಏರಿಕೆಯಾಗಿದೆ.