ಹೊಸದಿಗಂತ ವರದಿ,ವಿಜಯಪುರ:
ಆದಾಯ ಕಡಿಮೆ ಆಗ್ತಿದೆ. ಅಭಿವೃದ್ಧಿ, ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲವೇ ಅದಕ್ಕಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ನಗರದಲ್ಲಿ ಸುದ್ದಿಗಾರರಿಗೆ ಈ ಕುರಿತು ಪ್ರತಿಕ್ರಿಯಿಸಿದ ಅವರು, ಯಾರ ಮೇಲೂ ಅನಾವಶ್ಯಕವಾಗಿ ಹೊರೆ ಹಾಕುತ್ತಿಲ್ಲ ಎಂದರು.
ಬೇರೆ ರಾಜ್ಯಗಳನ್ನು ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಇದೆ. ತಮಿಳುನಾಡು ಸೇರಿದಂತೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆಯಿದೆ ಎಂದರು.
ಮೋದಿಯವರು ಬಂದ ಮೇಲೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದೆ ಅದನ್ನ ಯಾಕೆ ನೀವು ಕೇಳೋದಿಲ್ಲ. ಕೇಂದ್ರದಲ್ಲಿ ನಮ್ಮ ಸರ್ಕಾರ ಇದ್ದಾಗ 60 ರೂಪಾಯಿ ಪೆಟ್ರೋಲ್ ಇತ್ತು ಈಗ 105 ರೂಪಾಯಿ. ಉಳಿದ ರಾಜ್ಯಗಳನ್ನು ಹೋಲಿಕೆ ಮಾಡಿ ನೋಡಿ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ ಎಂದರು.