ಗ್ರಾಹಕನತ್ತ ಕೇಂದ್ರದ ಒ’ಲವ್’: ಶೀಘ್ರವೇ ಪೆಟ್ರೋಲ್, ಡೀಸೆಲ್ ದರ ಇಳಿಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪೆಟ್ರೋಲ್ ಹಾಗೂ ಡೀಸೆಲ್ ದರ ಇಳಿಕೆಯ ಕುರಿತಾಗಿ ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ತೀವ್ರಗತಿಯಲ್ಲಿ ಇಳಿಕೆ ದಾಖಲಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರವು ಇಂಧನ ದರ ಇಳಿಕೆ ಮಾಡುವತ್ತ ಚಿತ್ತ ನೆಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ 2022ರಲ್ಲಿ ಕಚ್ಚಾತೈಲದ ದರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡಿತ್ತು. ಇದರ ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ದರದಲ್ಲಿಯೂ ಏರಿಕೆಯಾಗಿತ್ತು. ಆ ಬಳಿಕ ಕಚ್ಚಾ ತೈಲದರ ಸತತ ಇಳಿಕೆ ದಾಖಲಿಸುತ್ತಿದ್ದು, ಇದರಿಂದಾಗಿ ತೈಲ ಕಂಪನಿಗಳು ಕಳೆದ ಮೂರು ತಿಂಗಳಲ್ಲಿ ಸುಮಾರು 28000 ಕೋಟಿ ರೂ.ಯಷ್ಟು ಲಾಭ ಮಾಡಿಕೊಂಡಿದೆ ಎಂದು ಅಂಕಿಅಂಶ ಹೇಳಿವೆ.

ಈ ಹಿನ್ನೆಲೆಯಲ್ಲಿ ಇಂಧನ ದರ ಇಳಿಸುವ ಕುರಿತಾಗಿ ಕೇಂದ್ರ ಸರ್ಕಾರ ಹೆಜ್ಜೆ ಇಡುವ ಸಾಧ್ಯತೆ ಅಧಿಕವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!