ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ದಿಗಂತ ವರದಿ ಮೈಸೂರು:
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ನಗರದ ಪೆಟ್ರೋಲ್ ಬಂಕ್ಗಳ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ನಗರದ ದಾಸಪ್ಪ ವೃತ್ತದ ಪೆಟ್ರೋಲ್ ಬಂಕ್ ಬಳಿ ಜಿಲ್ಲಾ ಕಾಂಗ್ರೆಸ್, ಧನ್ವಂತರಿ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಮಹಿಳಾ ಕಾಂಗ್ರೆಸ್ ಹಾಗೂ ನಗರ ಘಟಕ ಹಾಗೂ ಮಾನಂದವಾಡಿ ರಸ್ತೆಯ ಎನ್ಐಇ ಕಾಲೇಜಿನ ಸಮೀಪದ ಪೆಟ್ರೋಲ್ ಬಂಕ್ ಮುಂದೆ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ಅಂತರರಾಷ್ಟಿçÃಯ ಮಟ್ಟದಲ್ಲಿ ಇಂಧನ ಬೆಲೆ ಕಡಿಮೆಯಾದರೂ, ದೇಶದಲ್ಲಿ ಇಂಧನ ಬೆಲೆಯನ್ನು ಅವರು ಇಳಿಕೆ ಮಾಡಲಿಲ್ಲ, ಮನಮೋಹನ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, ಒಂದು ಬ್ಯಾರಲ್ ಕಚ್ಚಾ ತೈಲದ ಬೆಲೆ 110 ಡಾಲರ್ ಇದ್ದರೂ, ಅವರು ದೇಶದಲ್ಲಿ ಇಂಧನ ಬೆಲೆ ಏರಿಸಿರಲಿಲ್ಲ. ಈಗ ಬೆಲೆ 40 ಡಾಲರ್ ಆಗಿದ್ದರೂ, ಬಿಜೆಪಿ ಸರ್ಕಾರ ಬೆಲೆ ಇಳಿಕೆ ಮಾಡದೇ ಏರಿಕೆ ಮಾಡುತ್ತಿದೆ ಎಂದು ಕಿಡಿಕಾರಿದರು.