ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದರ ಏರಿಕೆ ಸಮಸ್ಯೆಯಿಂದ ಪಾಕಿಸ್ತಾನ ಬಳಲಿ ಬೆಂಡಾಗಿದೆ.
ಪ್ರತೀ ಲೀಟರ್ ಪೆಟ್ರೋಲ್‌ನ ಬೆಲೆ 321 ರೂಪಾಯಿ ಆಗಿದ್ದು, ಜನ ಹೈರಾಣಾಗಿದ್ದಾರೆ.ಸಂಘರ್ಷ ಹೆಚ್ಚಾದ ನಂತರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು ಭಾರೀ ಏರಿಕೆಯಾದ ಬೆನ್ನಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ದೇಶದಲ್ಲಿ ಇಂಧನ ಕೊರತೆಯಾಗಬಹುದು ಎಂಬ ಸುದ್ದಿ ಹಬ್ಬಿದ್ದರಿಂದ ಪಾಕಿಸ್ತಾನದಲ್ಲಿ ಈಗ ಪೆಟ್ರೋಲ್ ತುಂಬಿಸಲು ಬಂಕ್‌ಗಳ ಮುಂದೆ ಜನ ಸಾಲುಗಟ್ಟಿ ನಿಂತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಂಕ್ ಮುಂದೆ ವಾಹನಗಳು ಸಾಲುಗಟ್ಟಿ ನಿಂತಿರುವ ವಿಡಿಯೋಗಳು ವೈರಲ್ ಆಗಿವೆ.



