Tuesday, June 28, 2022

Latest Posts

ಇಂಧನ ದರ ಏರಿಕೆ ವಿರೋಧಿಸಿ ಇಂದು ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಇಂದು ಕಾಂಗ್ರೆಸ್ ದೇಶಾದ್ಯಂತ ಸಾಂಕೇತಿಕ ಪ್ರತಿಭಟನೆಗೆ ಕರೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸರ್ಕಾರ ಸೂಚಿಸಿರುವ ಎಲ್ಲಾ ಕೋವಿಡ್ ನಿಯಮಗಳ ಅನುಸಾರವಾಗಿ ಪಕ್ಷದ ಸ್ಥಳೀಯ ಘಟಕಗಳು ಪ್ರತಿಭಟನೆ ಆಯೋಜಿಸಿವೆ ಎಂದರು.
ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಗಳು ಹೆಚ್ಚಾಗುತ್ತಿರುವುದರಿಂದ ಎದುರಾಗುವ ಸಮಸ್ಯೆಗಳಿಂದ ಸಾರ್ವಜನಿಕ ಹಿತಾಸಕ್ತಿಗೆ ದಕ್ಕೆಯಾಗುತ್ತಿರುವುದನ್ನು ತಿಳಿಸಲು ಈ ಪ್ರತಿಭಟನೆ ಮಾಡಲಾಗುತ್ತಿದೆ ಎಂದರು.
ಬಿಜೆಪಿ ನೇತೃತ್ವದ ಸರ್ಕಾರದ ತಪ್ಪು ನೀತಿಗಳಿಂದಾಗಿ ದೇಶದ ಜನರು ಕಳೆದ 15 ತಿಂಗಳುಗಳಿಂದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss