ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಶಿವಮೊಗ್ಗ:
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ನಗರದ ವಿವಿಧ ಪೆಟ್ರೋಲ್ ಬಂಕ್ ಗಳ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಕೊವಿಡ್ ಸಂಕಷ್ಟದ ನಡುವೆಯೂ ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸುವ ಮೂಲಕ ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಿದೆ ಅಚ್ಚೆ ದಿನಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ದಿನೇ ದಿನೇ ಅಗತ್ಯ ವಸ್ತುಗಳನ್ನು ಏರಿಸುವ ಮೂಲಕ ತನ್ನ ಇಬ್ಬಗೆಯ ನೀತಿ ಅನುಸರಿಸುತ್ತಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತೈಲ ಬೆಲೆ ಇಳಿಕೆ ಆಗಲಿದೆ ಎಂದೇ ಎಲ್ಲರ ಭಾವನೆಯಾಗಿತ್ತು .ಆದರೆ ಜನೆ ನಂಬಿಕೆ ಹುಸಿಯಾಗಿದೆ ಎಂದು ದೂರಿದ್ದಾರೆ.
ಬಿಜೆಪಿ ಸರ್ಕಾರ ಜನರ ನಂಬಿಕೆಯನ್ನು ಹುಸಿ ಮಾಡಿ ತೈಲ ಬೆಲೆ ನಿರಂತರವಾಗಿ ಏರಿಕೆ ಮಾಡುವ ಮೂಲಕ ಜನರಿಗೆ ಜನರನ್ನು ಸಂಕಷ್ಟಕ್ಕೆ ದೂಡಿದೆ. ಯುಪಿಎ ಸರ್ಕಾರ ಇದ್ದಾಗ ಪ್ರತಿ ಲೀಟರ್ ಪೆಟ್ರೋಲ್ ಗೆ 75 ಹಾಗೂ ಡೀಸೆಲ್ ಬೆಲೆ 64 ರ ಆಸುಪಾಸಿನಲ್ಲಿತ್ತು. ಆದರೆ ಎನ್ ಡಿಎ ಸರ್ಕಾರ ಬಂದ ನಂತರ ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದೆ. ಡೀಸೆಲ್ ಬೆಲೆ ಶತಕದ ಅಂಚಿನಲ್ಲಿದೆ. ಮೊದಲೇ ಲಾಕ್ ಡೌನ್ ಸುಳಿಗೆ ಸಿಲುಕಿ ದೈನಂದಿನ ಜೀವನ ನಡೆಸುವುದೇ ಕಷ್ಟಕರವಾಗಿರುವಾಗ ತೈಲ ಬೆಲೆ ಏರಿಕೆಯಿಂದ ಜನರು ದಿಕ್ಕು ತೋಚದಂತಾಗಿದೆ. ತೈಲ ಬೆಲೆ ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿದೆ ಎಂದು ದೂರಿದ್ದಾರೆ.