spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮುಂದಿನ ಮೂರು ತಿಂಗಳಲ್ಲಿ ಪೆಟ್ರೋಲ್ ಬೆಲೆ ಇಳಿಕೆ: ಅಪ್ಪಚ್ಚುರಂಜನ್ ವಿಶ್ವಾಸ

- Advertisement -Nitte

ಹೊಸದಿಗಂತ ವರದಿ, ಕೊಡಗು:

ಮುಂದಿನ‌ ಮೂರು ತಿಂಗಳಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಸಿಲಿಂಡರ್‌ ಬೆಲೆಯನ್ನು ಇಳಿಸಲು ಪ್ರಧಾನಿ ನರೇಂದ್ರ ಮೋದಿ ಚಿಂತನೆ ನಡೆಸಿದ್ದಾರೆ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಪೆಟ್ರೋಲ್, ಡೀಸೆಲ್‍ನ್ನು ಜಿಎಸ್‍ಟಿ ವ್ಯಾಪ್ತಿಗೆ ತರುವುದರಿಂದ ಪ್ರತಿ ಲೀಟರ್ ಗೆ 20 ರೂಪಾಯಿ ಕಡಿಮೆ ಆಗಲಿದೆ. ಆದರೆ ಇದರಿಂದ ರಾಜ್ಯಗಳ ಆದಾಯಕ್ಕೆ ಪೆಟ್ಟು ಬೀಳಲಿರುವದರಿಂದ ಜಿಎಸ್‍ಟಿ ವ್ಯಾಪ್ತಿಗೆ ತರುವುದನ್ನು ರಾಜ್ಯಗಳು ವಿರೋಧಿಸುತ್ತಿವೆ. ಆದರೆ ಮೂರು ತಿಂಗಳಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಇಳಿಕೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಚಿಂತನೆ ಮಾಡಿದ್ದಾರೆ ಎಂದರು.
ದೇಶದಲ್ಲಿ ಕೋವಿಡ್ ಬಂದ ಬಳಿಕ ಈಗಾಗಲೇ ವ್ಯಾಕ್ಸಿನ್ ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ. ಹಲವು ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಅದಕ್ಕೆಲ್ಲಾ ಹಣ ಬೇಕಾಗಿರುವುದರಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ ಎಂದು ಅವರು ನುಡಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss