ಪೆಟ್ರೋಲ್‌-ಡೀಸೆಲ್‌ ಬೆಲೆಯಲ್ಲಿ ದಾಖಲೆಯ ಇಳಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿಹೋಗಿದ್ದ ಜನತಗೆ ಶನಿವಾರ ಸಂತಸದ ಸುದ್ದಿಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ನೀಡಿದ್ದಾರೆ. ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಲ್ಲಿ ದಾಖಲೆ ಇಳಿಕೆ ಮಾಡಲಾಗಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್‌ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರದ ಕುರಿತು ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ.
ಪೆಟ್ರೋಲ್‌ ಮೇಲಿನ 8 ರೂಪಾಯಿ ತೆರಿಗೆ ಮತ್ತು ಡೀಸೆಲ್‌ ಮೇಲಿನ 6 ರೂಪಾಯಿ ಅಬಕಾರಿ ಸುಂಕವನ್ನು ಇಳಿಕೆ ಮಾಡಲಾಗಿದೆ. ಈ ಮೂಲಕ ಪೆಟ್ರೋಲ್‌ ಬೆಲೆ ದೇಶಾದ್ಯಂತ ರೂ. 9.50 ಮತ್ತು ಡೀಸೆಲ್‌ ಬೆಲೆ ರೂ. 7 ಕಡಿಮೆಯಾಗಲಿದೆ.
ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ನಿರ್ಮಲಾ ಸೀತಾರಾಮನ್‌ , ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ತಲಾ ರೂ 8 ಮತ್ತು ರೂ. 6 ಕಡಿಮೆ ಮಾಡಲಾಗಿದೆ ಎಂದಿದ್ದಾರೆ. ಇದರಿಂದ ಜನಸಾಮಾನ್ಯರಿಗೆ ಇಂದಿನ ಬೆಲೆಗಿಂತ ಪೆಟ್ರೋಲ್‌ಗೆ ರೂ 9.50 ಕಡಿಮೆಯಾಗಲಿದ್ದು, ಡೀಸೆಲ್‌ ಒಂದು ಲೀಟರ್‌ ಗೆ ರೂ 7 ಕಡಿಮೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!