ಡಿವೈಡರ್‌ಗೆ ಡಿಕ್ಕಿ ಹೊಡೆದ ಪೆಟ್ರೋಲ್‌ ಟ್ಯಾಂಕರ್‌, ತಪ್ಪಿದ ಭಾರೀ ಅನಾಹುತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಬೆಳಗ್ಗೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ತುಂಬಿದ ಟ್ಯಾಂಕರ್ ಪಲ್ಟಿಯಾದ ಘಟನೆ ನಡೆದಿದೆ.

ಮಂಗಳೂರಿನಿಂದ ಅತ್ತಿಬೆಲೆಗೆ ತೆರಳುತ್ತಿದ್ದ ಟ್ಯಾಂಕರ್ ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ಹೆದ್ದಾರಿಯಲ್ಲಿದ್ದ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಟ್ಯಾಂಕರ್ ಪಲ್ಟಿ ಹೊಡೆದು ಅಪಾರ ಪ್ರಮಾಣದ ಪೆಟ್ರೋಲ್ ಹೊರ ಚೆಲ್ಲಿದೆ.

ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಕ್ರೇನ್ ಮೂಲಕ ಟ್ಯಾಂಕರ್ ಲಾರಿಯನ್ನು ಮೇಲಕ್ಕೆತ್ತಿದರು.

ಹೊಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ನಡೆದಿದ್ದು, ಇಡೀ ಮಾರ್ಗದಲ್ಲಿ ಟ್ರಾಫಿಕ್ ಜಾಮ್‌ಗೆ ಕಾರಣವಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!