ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಟ್ವಿಟರ್ ಖಾತೆಯನ್ನು ಅಮಾನತುಗೊಳಿಸಲಾಗಿದೆ. PFI ಮತ್ತು ಅದರ ಅಂಗಸಂಸ್ಥೆಗಳ ಮೇಲೆ ಕೇಂದ್ರ ಸರ್ಕಾರ ಐದು ವರ್ಷಗಳ ನಿಷೇಧ ಹೇರಿದ ಬೆನ್ನಲ್ಲೇ ಪಿಎಫ್ಐ ಟ್ವಿಟರ್ ಖಾತೆಯನ್ನು ಅಮಾನತುಗೊಳಿಸಿರುವುದಾಗಿ ಟ್ವಿಟರ್ ಸಂಸ್ಥೆ ವಿವರ ನೀಡಿದೆ. ಭಾರತದಲ್ಲಿ ಕಾನೂನು ಬೇಡಿಕೆಯ ಹಿನ್ನೆಲೆಯಲ್ಲಿ ನಾವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಟ್ವಿಟರ್ ಖಾತೆಯನ್ನು ಅಮಾನತುಗೊಳಿಸುತ್ತಿದ್ದೇವೆ. ಪಿಎಫ್‌ಐ ದೇಶದ ಯುವಕರನ್ನು ದಾರಿ ತಪ್ಪಿಸುತ್ತಿದ್ದು, ಭಯೋತ್ಪಾದಕ ಚಟುವಟಿಕೆಗಳಿಗೆ ಸೇರಲು ಪ್ರಯತ್ನಿಸುತ್ತಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಈಗಾಗಲೇ ಗುರುತಿಸಿದೆ.
ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಪಿಎಫ್‌ಐ ಅನ್ನು ನಿಷೇಧಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಕೆಲ ದಿನಗಳಿಂದ ಪಿಎಫ್ ಐ ಮುಖಂಡರ ಮನೆ, ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ತಂಡ (ಎನ್ ಐಎ) ದಾಳಿ ನಡೆಸುತ್ತಿರುವುದು ಗೊತ್ತೇ ಇದೆ. ಪಿಎಫ್‌ಐ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಂತೆ ಹಲವು ಕಡೆ ಮುಸ್ಲಿಮರು ಪ್ರತಿಭಟನೆ ನಡೆಸುತ್ತಿದ್ದಾರೆ.