ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

12 ವರ್ಷ ಮೇಲ್ಪಟ್ಟವರಿಗೆ ಫೈಜರ್ ಲಸಿಕೆ: ಶೀಘ್ರವೇ ಸಿಗಲಿದೆ ಅನುಮತಿ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:

12 ವರ್ಷ ಮೇಲ್ಪಟ್ಟ ಎಲ್ಲರಿಗೂ ಫೈಜರ್ ಬಯೊ ಎನ್‌ಟೆಕ್ ಲಸಿಕೆ ನೀಡಲು ಅಮೆರಿಕವು ಮುಂದಿನ ವಾರ ಅನುಮತಿ ನೀಡುವ ನಿರೀಕ್ಷೆ ಇದೆ.
12ರಿಂದ15 ವರ್ಷ ವಯಸ್ಸಿನವರಿಗೂ ಕೋವಿಡ್ ಲಸಿಕೆ ನೀಡಲು ಅನುಮತಿ ನೀಡುವಂತೆ ಫೈಜರ್ – ಬಯೊಎನ್‌ಟೆಕ್ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು ಎಂದು ಸರ್ಕಾರಿ ಅಧಿಕಾರಿಯೊಬ್ಬರ ಹೇಳಿಕೆ ಉಲ್ಲೇಖಿಸಿ ದಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.
ಮಾರ್ಚ್​ನಲ್ಲಿ ಕಂಪನಿಗಳ ನೇತೃತ್ವದ ಕ್ಲಿನಿಕಲ್ ಪ್ರಯೋಗದ ಫಲಿತಾಂಶಗಳು ಫೈಜರ್ – ಬಯೋಎನ್​ಟೆಕ್ ಲಸಿಕೆ ಯುವ ವಯಸ್ಕರಿಗಿಂತಲೂ ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ತೋರಿಸಿದೆ.
ಮಕ್ಕಳು ಬಲವಾದ ಪ್ರತಿಕಾಯ ಪ್ರತಿಕ್ರಿಯೆಗಳನ್ನು ಉಂಟು ಮಾಡಿದ್ದಾರೆ ಮತ್ತು ಯಾವುದೇ ಗಂಭೀರ ಅಡ್ಡಪರಿಣಾಮಗಳ ಕಂಡು ಬಂದಿಲ್ಲ ಎಂದು ಹೇಳಿದೆ.
ಈ ಕಾರಣದಿಂದ ಹದಿಹರೆಯದವರಿಗೆ ಲಸಿಕೆ ಹಾಕುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿಯಾಗಬಹುದು. ಇದರಿಂದ ಆಸ್ಪತ್ರೆಗೆ ದಾಖಲು ಮತ್ತು ಸಾವಿನ ಸಂಖ್ಯೆ ಕಡಿಮೆಯಾಗುತ್ತದೆ ಎಂದು ವರದಿ ತಿಳಿಸಿದೆ.
ಈ ವಿನಂತಿಯನ್ನು ಸಾಧ್ಯವಾದಷ್ಟು ಬೇಗ ಮತ್ತು ಪಾರದರ್ಶಕವಾಗಿ ಪರಿಶೀಲಿಸಲು ನಾವು ಕೆಲಸ ಮಾಡುತ್ತಿದ್ದೇವೆ ಎಂದು ನಾವು ಸಾರ್ವಜನಿಕರಿಗೆ ಭರವಸೆ ನೀಡಬಹುದು ಎಂದು ಎಫ್​​ಡಿಎ ವಕ್ತಾರ ಸ್ಟೆಫನಿ ಕ್ಯಾಕೊಮೊ ಹೇಳಿದ್ದಾರೆ ಎಂದು ನ್ಯೂಯಾರ್ಕ್​ ಟೈಮ್ಸ್​ ಉಲ್ಲೇಖಿಸಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss