ಪುನಃ ಏರಿಕೆಯಾದ ಅಡುಗೆ ಅನಿಲದ ಬೆಲೆ: ಗ್ರಾಹಕರ ಜೇಬಿಗೆ ಕತ್ತರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಡುಗೆ ಸಿಲಿಂಡರ್‌ ಬೆಲೆ ಏರಿಕೆ ನಿಲುವ ಸೂಚನೆ ಕಾಣುತ್ತಿಲ್ಲ. ಇಂದು ಕೂಡ ಬೆಲೆ ಏರಿಕೆ ಕಂಡಿದ್ದು, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 102.50 ಏರಿಕೆ ಕಂಡಿದ್ದು, ಪ್ರಸ್ತುತ ದರ 2,355.50 ರೂನಷ್ಟಿದೆ.5 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಈಗ 655 ರೂಪಾಯಿ ಹೆಚ್ಚಳವಾಗಿದೆ. ಈ ಹಿಂದೆ 19 ಕೆಜಿ ವಾಣಿಜ್ಯ ಅಡುಗೆ ಅನಿಲದ ಬೆಲೆ 2,253 ರೂ ಇತ್ತು ಇದೀಗ ಮತ್ತೆ ಏರಿಕೆ ಕಂಡಿದೆ.

ಈ ನಡುವೆ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಸೇರಿದಂತೆ ತೈಲ ಮಾರುಕಟ್ಟೆ ಕಂಪನಿಗಳು ಉಜ್ವಲ ದಿವಸ್ ಆಚರಿಸಲು ಇಂದು ದೇಶಾದ್ಯಂತ 5,000 ಕ್ಕೂ ಹೆಚ್ಚು ಎಲ್‌ಪಿಜಿ ಪಂಚಾಯತ್‌ ಆಯೋಜಿಸಲು ನಿರ್ಧರಿಸಲಾಗಿದೆ.

ಅನುಭವ ಹಂಚಿಕೆಯ ಹೊರತಾಗಿ, ದ್ರವೀಕೃತ ಪೆಟ್ರೋಲಿಯಂ ಅನಿಲದ (LPG) ಸುರಕ್ಷಿತ ಮತ್ತು ನಿರಂತರ ಬಳಕೆಯ ಗುರಿಯನ್ನು ಹೊಂದಿದೆ, ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರ ದಾಖಲಾತಿಯನ್ನು ಗರಿಷ್ಠಗೊಳಿಸಲು ಪ್ರಯತ್ನಗಳನ್ನು ಮಾಡುತ್ತಿವೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ನರೇಂದ್ರ ಮೋದಿ ಸರ್ಕಾರದ ಜನಪ್ರಿಯ ಕಾರ್ಯಕ್ರಮವಾಗಿದೆ. ಯೋಜನೆಯಡಿಯಲ್ಲಿ, ಪ್ರತಿ ಬಿಪಿಎಲ್ ಕುಟುಂಬಕ್ಕೆ ಉಚಿತ ಎಲ್ಪಿಜಿ ಸಂಪರ್ಕವನ್ನು ನೀಡಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!