March 29, 2026
Sunday, March 29, 2026
spot_img

ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿ ಎಬ್ಬಿಸಿದ್ದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಗುಪ್ತಚರ ಇಲಾಖೆಯ ದುರ್ಬಳಕೆ ಕುರಿತು ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದಲ್ಲಿ ಇಲಾಖೆ ಮೂಲಕ ಪಕ್ಷದ ಶಾಸಕರುಗಳು ಮತ್ತು ನಾಯಕರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಡಿಸಿಎಂ ಪರವಾದ ಶಾಸಕರನ್ನು ಗಮನಿಸಲು ಸಿಎಂರಿಂದ ಗುಪ್ತಚರ ಇಲಾಖೆ ಬಳಕೆ ಆಗ್ತಿದೆ ಎಂದು ಆರೋಪಿಸಿದ್ದಾರೆ.

ಈ ಬೆನ್ನಲ್ಲೇ ವಿಪಕ್ಷಗಳ ಆರೋಪದ ವಿರುದ್ಧ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ಇದು ತಾ ಕಳ್ಳ ಇತರರ ನಂಬ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ ಎಂದು ಕುಟುಕಿದ್ದಾರೆ.

ನಮ್ಮದು ಏಕ ಕುಟುಂಬದ ಅಧಿಪತ್ಯ ಇರುವ ಜೆಡಿಎಸ್ ಅಲ್ಲ. ನಮ್ಮ ಶಾಸಕರಲ್ಲಿ ಯಾರೂ ನನ್ನ, ಇಲ್ಲವೇ ಡಿಕೆಶಿ ಬೆಂಬಲಿಗರಲ್ಲ. ಎಲ್ಲರೂ ಕಾಂಗ್ರೆಸ್ ಪಕ್ಷದ ಬೆಂಬಲಿಗರು. ಪಕ್ಷದ ಶಿಸ್ತಿನ ಚೌಕಟ್ಟಿನೊಳಗೆ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸುವ ಜೊತೆಯಲ್ಲಿ ಊಟ-ತಿಂಡಿ ಮಾಡುವ ಎಲ್ಲ ಸ್ವಾತಂತ್ರ್ಯ ಅವರಿಗೆ ಇದೆ. ಶಾಸಕರು ಏನೇ ಹೇಳಿದರೂ ಹೈಕಮಾಂಡ್ ಆದೇಶಕ್ಕೆ ತಲೆಬಾಗ್ತೇವೆ ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !