ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಪೋಸ್ಟರ್‌ಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಿಡುಗಡೆಗೊಳಿಸಿದ್ದು, ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ಏ.22 ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಹಿಂದೂಗಳ ನರಮೇಧದಲ್ಲಿ 26 ಜನರು ಸಾವನ್ನಪ್ಪಿದ್ದರು. ಈ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮೂವರು ಶಂಕಿತ ಪಾಕ್ ಉಗ್ರರ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿದ್ದಾರೆ.
ಆ ಪೋಸ್ಟರ್‌ಗಳನ್ನು ಅಂಟಿಸಿ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ಸುಳಿವು ಕೊಟ್ಟವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ಉಲ್ಲೇಖಿಸಿದ್ದಾರೆ.