ಪಿಎಸ್‌ಐ ಅಕ್ರಮ ಆರೋಪಿ ದಿವ್ಯಾ ಜೊತೆ ಫೋಟೋ ವೈರಲ್: ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಜತೆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಫೋಟೋ ವೈರಲ್ ಆಗಿದ್ದು, ಈ ಕುರಿತು ಮಾತನಾಡಿದ ಡಿಕೆಶಿ ತನಿಖಾಧಿಕಾರಿಗಳು ನನಗೆ ನೊಟೀಸ್ ನೀಡಿ ಕರೆದು, ತನಿಖೆ ಮಾಡಲಿ ತಿಳಿಸಿದ್ದಾರೆ.
ನನ್ನನ್ನು ಬಹಳ ಮಂದಿ ಭೇಟಿ ಮಾಡುತ್ತಾರೆ. ಈ ಫೋಟೋ ಯಾವುದು ಎಂದು ನನಗೆ ಗೊತ್ತಿಲ್ಲ. ಈಗ ನಮ್ಮ ಸ್ನೇಹಿತರು ಈ ವಿಚಾರದ ಬಗ್ಗೆ ಹೇಳಿದ್ದಾರೆ, ಸಂತೋಷ. ಪೊಲೀಸ್ ಅಧಿಕಾರಿಗಳು ಮೊದಲು ನನಗೆ ನೋಟೀಸ್ ಕೊಟ್ಟು ವಿಚಾರಣೆಗೆ ಕರೆಯಲಿ. ನಾನು ಮಂತ್ರಿಯಾಗಿ ಕೆಲಸ ಮಾಡಿದವನು. ಅವರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ನಿಯೋಗದೊಂದಿಗೆ ಬಂದಿದ್ದರು, ತಮ್ಮ ಸಮಸ್ಯೆ ಹೇಳಿಕೊಂಡು ಹೋದರು, ಅಷ್ಟೇಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!