Monday, September 26, 2022

Latest Posts

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಭೀಕರ ಅಪಘಾತದ ದೃಶ್ಯಗಳು ಇಲ್ಲಿವೆ…

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗುರುವಾರ ನಸುಕಿನ ಜಾವ ತುಮಕೂರು ಜಿಲ್ಲೆಯ ಶಿರಾ ಹತ್ತಿರ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೇನಹಳ್ಳಿ ಗೇಟ್‌ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. 15ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

Image

Image

Image

Image

 ಸ್ಥಳದಲ್ಲಿಯೇ 9 ಜನರು ಸಾವನ್ನಪ್ಪಿದ್ದರೆ, 14 ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಮೃತರಲ್ಲಿ ಮೂವರು ಮಹಿಳೆಯರು, ನಾಲ್ವರು ಪುರುಷರು ಇಬ್ಬರು ಮಕ್ಕಳು ಸೇರಿದ್ದಾರೆ.

 ಮೃತರೆಲ್ಲರೂ ರಾಯಚೂರಿನಿಂದ ಕೂಲಿ‌‌ ಕೆಲಸಕ್ಕೆ ಬೆಂಗಳೂರಿಗೆ ಬರುತ್ತಿದ್ದರು. ಈ ವೇಳೆ ಬೆಳಗಿನ ಜಾವ ಸುಮಾರು 4 ಗಂಟೆಗೆ ಅಪಘಾತ ಸಂಭವಿಸಿದೆ.

 ಹಿಂಬದಿಯಿಂದ ಬಂದ ಲಾರಿಯೊಂದು ಕ್ರೂಸರ್​ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

 ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಗಾಯಾಳುಗಳೆಲ್ಲರೂ ಜಿಲ್ಲಾಸ್ಪತ್ರೆ ಮತ್ತು ಶಿರಾ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!