ಫೋಟೋ, ವಿಡಿಯೋ ಶೇರ್​ ಮಾಡಲ್ಲ: ಸದ್ದಿಲ್ಲದೇ ಮದುವೆಯಾದ ಬಾಲಿವುಡ್ ನಟಿ ತಾಪ್ಸಿ ಪನ್ನು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ (Bollywood) ಬ್ಯೂಟಿ ತಾಪ್ಸಿ ಪನ್ನು (Taapsee Pannu) ಇತ್ತೀಚೆಗಷ್ಟೇ ಮದುವೆಯಾಗಿದ್ದಾರೆ. ಆಪ್ತರಿಗಷ್ಟೇ ಆಹ್ವಾನಿಸಿ ಮದುವೆ ಆಗಿದ್ದರಿಂದ ಯಾರಿಗೂ ಮದುವೆ ವಿಚಾರವೇ ಗೊತ್ತಿರಲಿಲ್ಲ.

ತಾಪ್ಸಿ ಉದಯ್‌ಪುರದಲ್ಲಿ ಅದ್ಧೂರಿಯಾಗಿ ಮದುವೆಯಾಗಿರೋದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವಿಚಾರ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿತ್ತು. ಆದರೆ ತಮ್ಮ ಮದುವೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಅವರು ನೀಡಿರಲಿಲ್ಲ. ಮದುವೆ ಫೋಟೋ ಕೂಡ ಶೇರ್ ಮಾಡಿ ಪತಿ ಬಗ್ಗೆ ಮಾತನಾಡಿಲ್ಲ. ಇದೀಗ ಡ್ಯಾನ್ಸ್ ಮಾಡುತ್ತಾ ವೇದಿಕೆ ಏರಿ ಮಥಾಯಸ್ ಬೋ (Mathayas Bho) ಅವರಿಗೆ ಹಾರ ಹಾಕಿ ಖುಷಿಯಿಂದ ಮದುವೆ ಆಗುತ್ತಿರುವ ವಿಡಿಯೋ ಸದ್ದು ಮಾಡಿತ್ತು.

ಮಾರ್ಚ್ 20ರಿಂದ ಮದುವೆ ಸಂಭ್ರಮ ಶುರುವಾಗಿದ್ದು, ಮಾರ್ಚ್ 23ಕ್ಕೆ ತಾಪ್ಸಿ ಪನ್ನು- ಮಥಾಯಸ್ ಬೋ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ತಾಪ್ಸಿ ಸಿಖ್ ಧರ್ಮಕ್ಕೆ ಸೇರಿದವರು. ಮಥಾಯಸ್ ಕ್ರೈಸ್ತ ಧರ್ಮಕ್ಕೆ ಸೇರಿದ್ದಾರೆ. ಎರಡು ಧರ್ಮದ ಪದ್ಧತಿಯಂತೆ ಮದುವೆ ನೆಡೆದಿದೆ. ಆ ಕುರಿತು ಯಾವುದೇ ವಿಡಿಯೋ, ಫೋಟೋ ನೋಡಲು ಅಭಿಮಾನಿಗಳಿಗೆ ಸಿಗಲಿಲ್ಲ.

ಈ ಕುರಿತಂತೆ ಸ್ವತಃ ತಾಪ್ಸಿ ಅವರೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ನನಗೆ ಫೋಟೋ ಮತ್ತು ವಿಡಿಯೋವನ್ನು ಮುಚ್ಚಿಡುವಂತಹ ಉದ್ದೇಶವಿರಲಿಲ್ಲ. ಆದರೆ, ಅದು ನನ್ನ ಖಾಸಗಿ ಕಾರ್ಯಕ್ರಮ. ಹಾಗಾಗಿ ಅದನ್ನು ಹಂಚಿಕೊಳ್ಳಲ್ಲ ಎಂದು ಹೇಳುವ ಮೂಲಕ ನಿರಾಸೆ ಮೂಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!