Wednesday, August 17, 2022

Latest Posts

ವಿಕಲಚೇತನರಿಗೆ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ನೀಡಿ: ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಜಿಲ್ಲೆಯಲ್ಲಿ ವಾಸವಿರುವ ವಿಕಲಚೇತನರಿಗೆ ಆದ್ಯತೆ ಮೇಲೆ ಕೋವಿಡ್ ಲಸಿಕೆ ನೀಡಲು ಶ್ರಮಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ವಾಸಿಸುತ್ತಿರುವ ಅಂಗವಿಕಲ ವ್ಯಕ್ತಿಗಳ ಮಾಹಿತಿ ಪಡೆಯಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲೆಯಲ್ಲಿ ನೇಮಿಸಿರುವ ಪ್ರತಿ ಗ್ರಾ.ಪಂ.ಮಟ್ಟದಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ನಗರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ ತಾಲೂಕು ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಕ್ರಮಕೈಗೊಳ್ಳಬೇಕೆಂದು ಅವರು ಸೂಚಿಸಿದ್ದಾರೆ.
ಮಡಿಕೇರಿ ತಾಲೂಕು ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜೇಶ(8073192914), ಸೋಮವಾರಪೇಟೆ ತಾಲೂಕು ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹರೀಶ್ ಟಿ.ಆರ್(9008685129) ಹಾಗೂ ವೀರಾಜಪೇಟೆ ತಾಲೂಕು ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಥನ್ ಸಿ.ಬಿ(9900883654) ಇವರಿಂದ ಮಾಹಿತಿ ಪಡೆದು ತುರ್ತಾಗಿ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ನೀಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕರು, ಎಲ್ಲಾ ತಹಶೀಲ್ದಾರರು, ಎಲ್ಲಾ ತಾ.ಪಂ.ಇಒಗಳು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಾರ್ಯೋನ್ಮುಖರಾಗುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ನಿರ್ದೇಶನ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!