ಪಿಕಪ್ ವಾಹನ ಚಾಲಕ ಅಬ್ದುಲ್ ರಹೀಮ್ ಹತ್ಯೆ ಪ್ರಕರಣ; 15 ಮಂದಿ ವಿರುದ್ಧ FIR ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಂಟ್ವಾಳದ ಕುರಿಯಾಳದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಮಂಗಳವಾರ ನಡೆದ ಪಿಕಪ್ ವಾಹನ ಚಾಲಕ ಅಬ್ದುಲ್ ರಹೀಮ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಎಫ್‌ಐಆರ್‌ನಲ್ಲಿ ದೀಪಕ್, ಸುಮಿತ್ ಮತ್ತು ಇತರ 13 ಜನರ ಹೆಸರುಗಳನ್ನು ದಾಖಲಿಸಲಾಗಿದ್ದು, ಇವರ ವಿರುದ್ಧ ಸೆಕ್ಷನ್ 103, 109, 118(1), 118(2), 190, 191(1), 191(2) ಮತ್ತು 191(3) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧ ಮೊಹಮ್ಮದ್ ನಿಸಾರ್ ಎಂಬುವವರು ದೂರು ನೀಡಿದ್ದು, ದೂರಿನ ಪ್ರಕಾರ ಮಧ್ಯಾಹ್ನ 3 ಗಂಟೆಗೆ ಮುಸ್ತಫಾ ಎಂಬವರಿಂದ ದೂರವಾಣಿ ಕರೆ ಬಂದಿತ್ತು. ಇರ ಕೋಡಿಯಲ್ಲಿ ಅಬ್ದುಲ್ ರಹೀಮ್ ಮತ್ತು ಕಲಂದರ್ ಶಫಿ (ಗಾಯಗೊಂಡ) ಮೇಲೆ ‘ತಲ್ವಾರ್’ ನಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿಸಿದ್ದರು.

ಮಧ್ಯಾಹ್ನ 3.45 ಕ್ಕೆ ಸ್ಥಳಕ್ಕೆ ತಲುಪಿದಾಗ ರಹೀಮ್ ತಲೆ, ಕುತ್ತಿಗೆ ಮತ್ತು ದೇಹದ ಇತರ ಭಾಗಗಳಲ್ಲಿ ಗಂಭೀರ ಗಾಯಗಳಾಗಿ ನೆಲಕ್ಕೆ ಬಿದ್ದಿರುವುದನ್ನು ಕಂಡಿ ಬಂದಿತ್ತು. ರಹೀಮ್ ಪಕ್ಕದಲ್ಲಿ ಕುಳಿತಿದ್ದ ಕಲಂದರ್ ಶಫಿ ಅವರ ಎದೆ, ಬೆನ್ನು ಮತ್ತು ಕೈಗಳಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಂಬ್ಯುಲೆನ್ಸ್‌ನಲ್ಲಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ, ಶಫಿ ನನ್ನೊಂದಿಗೆ ಮಾತನಾಡಿದ್ದ. ಹೊಳೆ ಬದಿಯಿಂದ ಪಿಕ್ಅಪ್‌ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ಮನೆಯೊಂದರ ಬಳಿ ಇಳಿಸಲಾಗುತ್ತಿತ್ತು. ಈ ವೇಳೆ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ರಹೀಮ್ ನನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್‌ನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದರು. ಇದನ್ನು ತಡೆಯಲು ಹೋದಾಗ ನನ್ನ ಮೇಲೂ ಚೂರಿಯಿಂದ ಎದೆಗೆ, ಬೆನ್ನಿಗೆ, ಕೈಗೆ ಹಲ್ಲೆ ನಡೆಸಿದರು. ಈ ವೇಳೆ ಅಲ್ಲಿದ್ದವರು ಬೊಬ್ಬೆ ಹಾಕಿದ್ದರಿಂದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದರು ಎಂದು ಹೇಳಿದ್ದ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!