ಹೊಸದಿಗಂತ ವರದಿ ಯಾದಗಿರಿ :
ಹತ್ತಿ ಬಿಡಿಸಲು ಕಾರ್ಮಿಕರನ್ನು ಕೆಲಸಕ್ಕೆ ಕರೆದೊಯ್ಯುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಓರ್ವ ಕಾರ್ಮಿಕ ಮಹಿಳೆ ಮೃತಪಟ್ಟದ್ದು,12 ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯಗಳಾಗಿರುವ ಘಟನೆ ಗುರಮಠಕಲ್
ತಾಲೂಕಿನ ಧರ್ಮಾಪುರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಇಟಕಲ್ ನಿವಾಸಿ ಮೊಗಲಮ್ಮ (22) ಮೃತ ಮಹಿಳೆ. ಹತ್ತಿ ಕೃಷಿಯ ಕೆಲಸಕ್ಕೆ ಕಾರ್ಮಿಕರನ್ನು ಪಿಕಪ್ ವಾಹನದ ಮೂಲಕ ಕರೆ ತರಲಾಗುತ್ತಿತ್ತು ಎನ್ನಲಾಗಿದೆ.
ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಮತ್ತು ರಾಯಚೂರಿನ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗಿದ್ದು, ಗುರಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.