ಬಾನಂಗಳಲ್ಲಿ ಮತ್ತೆ ಬಣ್ಣ ಬಣ್ಣದ ಹಕ್ಕಿಗಳ ಚಿತ್ತಾರ: ಯಲಹಂಕದ ಏರ್‌ ಶೋಗೆ ದಿನಾಂಕ ಫಿಕ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದೇಶದ ದ್ವೈವಾರ್ಷಿಕ ವೈಮಾನಿಕ ಪ್ರದರ್ಶನ ಏರೋಇಂಡಿಯಾ -2023 ಅನ್ನು ಫೆಬ್ರವರಿ 13, 2023 ರಿಂದ ಬೆಂಗಳೂರಿನ ಯಲಹಂಕದ ವಾಯುಪಡೆ ನಿಲ್ದಾಣದಲ್ಲಿ ಪ್ರಾರಂಭವಾಗಲಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಡಿಫೆನ್ಸ್ ಪ್ರೊಡಕ್ಷನ್ ಇಂಡಿಯಾ, ‘ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನವನ್ನು #AeroIndia2023 ಘೋಷಿಸಲಾಗಿದೆ. ದಿನಾಂಕಗಳನ್ನು 2023 ರ ಫೆಬ್ರವರಿ 13-17 ರಂದು ದ್ವೈವಾರ್ಷಿಕ ವೈಮಾನಿಕ ಪ್ರದರ್ಶನವು ಕರ್ನಾಟಕದ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.

 

ಹಲವು ದೇಶ, ವಿದೇಶ ಯುದ್ಧ ವಿಮಾನಗಳ ಮೈನವಿರೇಳಿಸುವ ಹಲವು ವೈಶಿಷ್ಟ್ಯಗಳೊಂದಿಗೆ 14ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!