SHOCKING VIDEO| ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆರಗಿದ ಹಂದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಗ, ನಾಯಿ, ಹಸು ಮತ್ತು ಗೂಳಿಗಳು ದಾಳಿ ಆಯಿತು, ಈಗ ಅವುಗಳ ಜಾಗಕ್ಕೆ ಹಂದಿಗಳೂ ನುಗ್ಗಿವೆ. ಹೌದು, ಈಗ ಹಂದಿಗಳ ಸರದಿ. ಮಹಾರಾಷ್ಟ್ರದ ಗೊಂಡಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮನೆಯ ಮುಂದೆ ಮೂವರು ಮಕ್ಕಳು ಆಟವಾಡುತ್ತಿದ್ದು, ಇದ್ದಕ್ಕಿದ್ದಂತೆ ಬಂದ ಹಂದಿಯೊಂದು ಓರ್ವ ಬಾಲಕನ ಮೇಲೆರಗಿದೆ. ಹಂದಿ ಓಟಕ್ಕೆ ಇನ್ನಿಬ್ಬರು ಮಕ್ಕಳು ರಸ್ತೆಯಲ್ಲಿ ಬಿದ್ದು,ಅವರಿಗೂ ಸಣ್ಣ-ಪುಟ್ಟ ಗಾಯಗಳಾಗಿವೆ.

ದಾಳಿಯಲ್ಲಿ ಹಂದಿ ಬಾಲಕನ ಕೈ ಹಾಗೂ ಹೊಟ್ಟೆಗೆ ಹಲವು ಬಾರಿ ಕಚ್ಚಿದೆ. ಕೂಗಾಟ ಕೇಳಿ ಅಕ್ಕಪಕ್ಕದ ಜನರು ಜಾಗೃತರಾಗಿ ಅಲ್ಲಿಗೆ ಬಂದು ಹಂದಿಯನ್ನು ಓಡಿಸಿ ಮಗುವನ್ನು ರಕ್ಷಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನ ಸ್ಥಿತಿ ಚಿಂತಾಜನಕವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!