ಉತ್ತರಾಖಂಡ: ಕಂದಕಕ್ಕೆ ಉರುಳಿ ಬಿದ್ದ ಯಾತ್ರಾರ್ಥಿಗಳ ಬಸ್; 7 ಸಾವು, 22 ಮಂದಿಗೆ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಉತ್ತರಕಾಶಿ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ 4:15 ಕ್ಕೆ 33 ಪ್ರಯಾಣಿಕರಿದ್ದ ಖಾಸಗಿ ಬಸ್ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದ್ದು, ಸದ್ಯಕ್ಕೆ 7 ಮಂದಿ ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಮಾಹಿತಿಯ ಪ್ರಕಾರ, ಗುಜರಾತ್‌ನಿಂದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಗಂಗೋತ್ರಿ ಹೆದ್ದಾರಿಯ ಗಂಗ್ನಾನಿ ಎಂಬಲ್ಲಿ ಆಳವಾದ ಕಮರಿಗೆ ಬಿದ್ದಿದೆ. ಬಸ್ ಗಂಗೋತ್ರಿಧಾಮದಿಂದ ಉತ್ತರಕಾಶಿ ಕಡೆಗೆ ಹೋಗುತ್ತಿತ್ತು. ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿ, 22 ಮಂದಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಇಲಾಖೆ ಖಚಿತಪಡಿಸಿದೆ. ಗಾಯಾಳುಗಳನ್ನು ಆಂಬ್ಯುಲೆನ್ಸ್​ ಮೂಲಕ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ಪೊಲೀಸರು, ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಮೃತರ ಮತ್ತು ಗಾಯಾಳುಗಳ ಗುರುತು ಪತ್ತೆ ಹಚ್ಚಲಾಗುತ್ತಿದೆ. ಅಪಘಾತಕ್ಕೀಡಾದ ಬಸ್‌ನಲ್ಲಿ ಇದ್ದ ಎಲ್ಲರೂ ಗುಜರಾತಿ ಯಾತ್ರಾರ್ಥಿಗಳು ಎಂದು ತಿಳಿದುಬಂದಿದೆ.

ಸಿಎಂ ಪುಷ್ಕರ್ ಸಿಂಗ್ ಧಾಮಿ ಸಂತಾಪ: ಉತ್ತರಕಾಶಿಯಲ್ಲಿ ನಡೆದ ಭೀಕರ ಅಪಘಾತಕ್ಕೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಸಂತಾಪ ಸೂಚಿಸಿದ್ದಾರೆ. ಏಳು ಜನರ ಸಾವಿಗೆ ಕಾರಣವಾದ ಅಪಘಾತ ದುಃಖ ತರಿಸಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಕೋರಿದ್ದಾರೆ.
“ದೇವರು ಅಗಲಿದ ಆತ್ಮಗಳಿಗೆ ಶಾಂತಿ ಮತ್ತು ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ. ಗಾಯಗೊಂಡವರೆಲ್ಲರೂ ಚೇತರಿಸಿಕೊಳ್ಳಲೆಂದು ನಾನು ಬಯಸುವುದಾಗಿ ಅವರು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!