Thursday, July 7, 2022

Latest Posts

ಮತ್ಸ್ಯಾಶ್ರಯ ಯೋಜನೆ: ಮನೆ ಮಂಜೂರಾತಿ ಪತ್ರ ವಿತರಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಮಡಿಕೇರಿ:

ಮತ್ಸ್ಯಾಶ್ರಯ ಯೋಜನೆಯಡಿ ಅರ್ಹ ನಾಲ್ಕು ಫಲಾನುಭವಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಅವರು ತಮ್ಮ ಕಚೇರಿಯಲ್ಲಿ ಮನೆ ಮಂಜೂರಾತಿ ಪತ್ರ ವಿತರಿಸಿದರು.
ನಿಟ್ಟೂರು ಗ್ರಾ.ಪಂ. ವ್ಯಾಪ್ತಿಯ ಕೆ.ಎಸ್.ಡಿಕ್ಕಿ, ಕೋತೂರು ಗ್ರಾ.ಪಂ. ವ್ಯಾಪ್ತಿಯ ಎಂ.ಎಂ.ವಿಲಾಸಿನಿ, ಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ಎಂ.ಎ.ಗಣಪತಿ, ಗೋಣಿಕೊಪ್ಪ ಗ್ರಾ.ಪಂ. ವ್ಯಾಪ್ತಿಯ ಎಚ್.ಆರ್.ಮಧು ಅವರಿಗೆ ಮನೆ ಮಂಜೂರಾತಿ ಆದೇಶ ಪತ್ರವನ್ನು ಅವರು ವಿತರಿಸಿದರು.
2018-19 ನೇ ಸಾಲಿನ 12 ನೇ ಹಂತದ ಮತ್ಸ್ಯಾಶ್ರಯ ಯೋಜನೆಯಡಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ 5 ಮನೆಗಳ ಮಂಜೂರಾತಿ ದೊರೆತಿದ್ದು, ಇವರಲ್ಲಿ ಅನುಮೋದನೆ ದೊರೆತ ನಾಲ್ಕು ಮಂದಿಗೆ ಶಾಸಕ ಕೆ.ಜಿ.ಬೋಪಯ್ಯ ಅವರು ಮನೆ ಮಂಜೂರಾತಿ ಪತ್ರವನ್ನು ವಿತರಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss