ಬೆಂಗಳೂರಿನಲ್ಲಿ ಪಿಲ್ಲರ್ ಕುಸಿತ: ಮೃತರ ಕುಟುಂಬಕ್ಕೆ ರೂ.10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ,ಧಾರವಾಡ:

ಬೆಂಗಳೂರಿನಲ್ಲಿ ಪಿಲ್ಲರ್ ಕುಸಿತದಿಂದ ಮೃತಪಟ್ಟ ಇಬ್ಬರು ವ್ಯಕ್ತಿಗಳ ಕುಟುಂಬಕ್ಕೆ ತಲಾ ೧೦ ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೃತಪಟ್ಟವರು ಧಾರವಾಡ ಮತ್ತು ಗದಗ ಮೂಲದವರೆಂದು ತಿಳಿದಿದೆ. ಬೆಳಿಗ್ಗೆ ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಈ ದುರ್ಘಟನೆ ನಡೆದಿದೆ ಎಂದು ಬೇಸರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!