ಹೊಸದಿಗಂತ ಡಿಜಿಟಲ್ ಡೆಸ್ಕ್:
ಏರ್ ಇಂಡಿಯಾ ಪೈಲಟ್ ಆತ್ಮಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಆಕೆಯ ಪ್ರಿಯಕರನಿಗೆ ಮುಂಬೈ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಆಹಾರ ಪದ್ಧತಿ ಬದಲಾಯಿಸುವಂತೆ ಮತ್ತು ಮಾಂಸಾಹಾರ ಸೇವಿಸುವುದನ್ನು ನಿಲ್ಲಿಸುವಂತೆ ಪ್ರಿಯಕರ ಒತ್ತಡ ಹೇರಿದ ಪರಿಣಾಮ ಏರ್ ಇಂಡಿಯಾ ಪೈಲಟ್ ಸೃಷ್ಟಿ ತುಲಿ (25) ಅಂಧೇರಿಯ ಮರೋಲ್ ಪ್ರದೇಶದಲ್ಲಿರುವ ‘ಕನಕಿಯಾ ರೈನ್ ಫಾರೆಸ್ಟ್’ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.
ಕಳೆದ ನವೆಂಬರ್ 25ರಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಳು. ಘಟನೆ ಬೆಳಕಿಗೆ ಬಂದ ಮರುದಿನವೇ ಆಕೆಯ ಗೆಳೆಯನನ್ನ ಪೊಲೀಸರು ಬಂಧಿಸಿದ್ದರು. ಬಿಎನ್‌ಎಸ್ ಸೆಕ್ಷನ್ 108 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಪ್ರಕರಣದ ವಿಚಾರಣೆಗಾಗಿ ಇಂದು ಆರೋಪಿಯನ್ನ ಮುಂಬೈನ ಸೆಷನ್ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ದಿಂಡೋಶಿ ನ್ಯಾಯಾಲಯ) ಟಿ.ಟಿ ಅಗ್ಲಾವ್ ಜಾಮೀನು ನೀಡಿ ಆದೇಶಿಸಿದ್ದಾರೆ.
ತುಳಿ ಅವರ ತಂದೆ ನೀಡಿದ ದೂರಿನಲ್ಲಿ ಆರೋಪಿಗಳು ಮತ್ತು ಅವರ ಮಗಳು ಆತ್ಮಹತ್ಯೆಗೆ ಐದು-ಆರು ದಿನಗಳ ಮೊದಲು ಒಂದೇ ಕೋಣೆಯಲ್ಲಿ ವಾಸಿಸುತ್ತಿದ್ದರು. ಆದರೆ, ಘಟನೆ ನಡೆದ ದಿನ ಆರೋಪಿಗಳು ದೆಹಲಿಗೆ ತೆರಳಿದ್ದರು. ಇ
ಏನಿದು ಪ್ರಕರಣ?
ಆರೋಪಿ ಆದಿತ್ಯ ಸೃಷ್ಟಿಯನ್ನು ಪದೇಪದೇ ಸಾರ್ವಜನಿಕವಾಗಿ ಅವಮಾನಿಸುವುದಲ್ಲದೇ ಆಕೆಯ ಆಹಾರ ಪದ್ಧತಿ ಬದಲಾಯಿಸುವಂತೆ ಹೇಳುತ್ತಿದ್ದ. ಅಲ್ಲದೇ ಮಾಂಸಾಹಾರ ಸೇವನೆ ಬಿಡುವಂತೆ ಆಕೆಯ ಮೇಲೆ ಒತ್ತಡ ಹೇರಿದ್ದ ಎಂದು ಸೃಷ್ಟಿ ಚಿಕ್ಕಪ್ಪ ಆರೋಪಿಸಿದ್ದಾರೆ. ಈ ವಿಷಯವಾಗಿ ಇಬ್ಬರ ನಡುವೆ ಜಗಳವಾಗಿತ್ತು.
ನಂತರ ದೆಹಲಿಗೆ ತೆರಳುತ್ತಿದ್ದ ಪ್ರಿಯಕರ ಆದಿತ್ಯನಿಗೆ ಸೃಷ್ಟಿ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಳು. ಇದನ್ನು ತಿಳಿದ ಆದಿತ್ಯ ತಕ್ಷಣವೇ ಆಕೆ ಇದ್ದ ಫ್ಲ್ಯಾಟ್‌ಗೆ ಬಂದು ನೋಡಿದಾಗ ಬಾಗಿಲು ಲಾಕ್ ಆಗಿತ್ತು. ಈ ವೇಳೆ ನಕಲಿ ಕೀ ತಯಾರಕರನ್ನು ಕರೆಸಿ ಬಾಗಿಲು ತೆಗೆದು ನೋಡಿದಾಗ ಸೃಷ್ಟಿ ಡೇಟಾ ಕೇಬಲ್ ಸಹಾಯದಿಂದ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಆಕೆಯನ್ನು ಅಂಧೇರಿಯ ಸೆವೆನ್ ಹಿಲ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟು ಹೊತ್ತಿಗಾಗಲೇ ಆಕೆಯ ಪ್ರಾಣಪಕ್ಷಿ ಹಾರಿಹೋಗಿತ್ತು.