ಪೂಜಾ ಸ್ಥಳಗಳ ಕಾಯ್ದೆ: ಅರ್ಜಿಗೆ ಸುಪ್ರೀಂ ಪುರಸ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪೂಜಾ ಸ್ಥಳ 1991 ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯಲ್ಲಿ ಮಧ್ಯ ಪ್ರವೇಶಿಸಲು ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಅಲ್ಲದೇ, ಮೂವರು ನ್ಯಾಯಮೂರ್ತಿಗಳ ತ್ರಿಸದಸ್ಯ ಪೀಠ ಈ ಅರ್ಜಿಯನ್ನು ವಿಚಾರಣೆ ನಡೆಸಲಿದೆ. ಅಕ್ಟೋಬರ್ 11ರಂದು ಪೂಜಾ ಸ್ಥಳ ಕಾಯ್ದೆ ಸಿಧುತ್ವ ಪರೀಕ್ಷೆ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ತಿಳಿಸಿದೆ.

ಜಮಿಯತ್ ಉಲಾಮ-ಹಿಂದ್ ಈಗಾಗಲೇ 1991ರ ಪೂಜಾ ಸ್ಥಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರು ಅರ್ಜಿ ತಿರಸ್ಕರಿಸಿ ಯಥಾ ಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಅರ್ಜಿ ಸಲ್ಲಿಸಿದೆ. ಸುಪ್ರೀಂ ಕೋರ್ಟ್ ಈ ಕಾಯ್ದೆಯನ್ನು ಪ್ರಶ್ನಿಸಿ ಬಂದಿರುವ ಅರ್ಜಿಯನ್ನು ಪುರಸ್ಕರಿಸಿದರೆ ದೇಶದಲ್ಲಿನ ಅಸಂಖ್ಯಾತ ಮಸೀದಿಗಳು ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ಅರ್ಜಿಯಲ್ಲಿ ಜಮಿಯತ್ ಉಲಾಮ-ಹಿಂದ್ ಉಲ್ಲೇಖಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!