May 6, 2026
Wednesday, May 6, 2026
spot_img

ವಿಜಯ್ ಅಬ್ಬರಕ್ಕೆ ಕಡಿವಾಣ ಹಾಕಲು ಪ್ಲಾನ್: ಬದ್ಧವೈರಿಗಳಾದ ಡಿಎಂಕೆ-ಎಐಎಡಿಎಂಕೆ ಮೈತ್ರಿ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗುತ್ತಿರುವ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ರಾಜ್ಯಪಾಲರು ಬಹುಮತದ ಅಸ್ತ್ರ ಬಳಸಿ ಬ್ರೇಕ್ ಹಾಕಿದ್ದು, ಈ ಬೆನ್ನಲ್ಲೇ ಬದ್ಧ ಎದುರಾಳಿಗಳಾದ ಡಿಎಂಕೆ ಮತ್ತು ಎಐಎಡಿಎಂಕೆ ಪರಸ್ಪರ ಕೈಜೋಡಿಸುವ ಮೂಲಕ ಸರಕಾರ ರಚಿಸಲು ಗುಪ್ತ ಮಾತುಕತೆ ನಡೆಸುತ್ತಿದೆ.

ವಿಜಯ್ ಗೆ ಈಗಾಗಲೇ ಕಾಂಗ್ರೆಸ್ ಬೆಂಬಲ ನೀಡಿದ್ದು, ಆದರೆ ಸ್ಪಷ್ಟ ಬಹುಮತಕ್ಕೆ ಬೇಕಿರುವ ಸೀಟುಗಳ ಕೊರತೆ ಕಾಡುತ್ತಿದೆ. ಹೀಗಾಗಿ ಉಳಿದ ಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನಗಳು ನಡೆಯುತ್ತಿದೆ. ಇದರ ನಡುವೆ ಡಿಎಂಕೆ ನಾಯಕರು ಎಐಎಡಿಎಂಕೆ ಜೊತೆಗೆ ಮೈತ್ರಿ ಮಾತುಕತೆ ನಡೆಸುತ್ತಿದ್ದಾರೆ ಎಂಬ ವರದಿಗಳು ಹರಿದಾಡುತ್ತಿದೆ.

ಒಂದು ವೇಳೆ ರಾಜಕೀಯ ಬದ್ದ ವೈರಿಗಳಾದ ಎರಡು ಪಕ್ಷಗಳು ವಿಜಯ್ ಅಬ್ಬರಕ್ಕೆ ಕಡಿವಾಣ ಹಾಕಲು ಒಂದಾದರೆ ತಮಿಳುನಾಡು ರಾಜಕೀಯದಲ್ಲಿ ಹೊಸ ಬದಲಾವಣೆಗೆ ಸಾಕ್ಷಿಯಾಗಲಿದೆ.

ತಮಿಳುನಾಡಿನಲ್ಲಿ ಬಹುಮತಕ್ಕೆ ಅಗತ್ಯವಿರುವ ಮ್ಯಾಜಿಕ್ ನಂಬರ್ 118 ಆಗಿದೆ. ವಿಜಯ್‌ ನೇತೃತ್ವದ ಟಿವಿಕೆ 108 ಸ್ಥಾನಗಳನ್ನು ಜಯಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಡಿಎಂಕೆ 59, ಎಐಎಡಿಎಂಕೆ 47, ಕಾಂಗ್ರೆಸ್‌ 5, ಪಿಎಂಕೆ 4, ಐಯುಎಂಎಲ್ 2, ಸಿಪಿಐ 2, ಸಿಪಿಐ (ಎಂ) 2, ಮತ್ತು ಬಿಜೆಪಿ, ಡಿಎಂಡಿಕೆ ಮತ್ತು ಎಎಂಎಂಕೆ ತಲಾ ಒಂದು ಸ್ಥಾನವನ್ನು ಗೆದ್ದಿವೆ. ಹೀಗಾಗಲಿ ಯಾವ ಮೈತ್ರಿ ಸರಕಾರ ರಚನೆಯಾಗಲಿದೆ ಎಂಬುವುದು ಕಾದುನೋಡಬೇಕಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !