ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ ನ ಅಹ್ಮದಾಬಾದ್ ನಲ್ಲಿ 274 ಮಂದಿ ಬಲಿ ಪಡೆದ ಏರ್ ಇಂಡಿಯಾ ವಿಮಾನ ಪತನದಿಂದ ಗಾಯಗೊಂಡಿರುವ ಸ್ಥಳೀಯ ವೈದ್ಯಕೀಯ ಕಾಲೇಜ್ ಹಾಸ್ಟೆಲ್ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿರುವ ಅಹ್ಮದಾಬಾದ್ ಸಿವಿಲ್ ಆಸ್ಪತ್ರೆಗೆ ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಭೇಟಿ ನೀಡಿ ಗಾಯಾಳುಗಳ ಆರೋಗ್ಯ ಸ್ಥಿತಿ ವಿಚಾರಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಜತೆಗಿದ್ದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ. ಶಿವಕುಮಾರ್ ಅವರು ಯಾದಗಿರಿಯಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲ್ಬುರ್ಗಿಯಿಂದ ನೇರವಾಗಿ ವಿಶೇಷ ವಿಮಾನದಲ್ಲಿ ಅಹ್ಮದಾಬಾದ್ ಗೆ ತೆರಳಿದ್ದರು.