ವಿಮಾನ ಮಹಾದುರಂತ: ವೈದ್ಯರ ಹಾಸ್ಟೆಲ್​ಗೆ ವಿಮಾನ ಡಿಕ್ಕಿ.. 7 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏರ್ ಇಂಡಿಯಾ ವಿಮಾನವು ತಾಂತ್ರಿಕ ದೋಷದಿಂದ ಮೇಘಾನಿ ಪ್ರದೇಶದ ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ 7 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಈ ದುರಂತದ ವೇಳೆ ಮೆಸ್‌ನಲ್ಲಿದ್ದ ವಿದ್ಯಾರ್ಥಿಗಳು ಮಧ್ಯಾಹ್ನ ತಿನ್ನುತ್ತಿದ್ದ ಊಟವನ್ನು ಅರ್ಧಕ್ಕೆ ಬಿಟ್ಟು ದಿಕ್ಕಾಪಾಲಾಗಿ ಓಡಿರುವ ಅಪಘಾತದ ಭೀಕರತೆಯ ದೃಶ್ಯವನ್ನು ಚಿತ್ರವೊಂದು ವಿವರಿಸುತ್ತದೆ.

ಮಧ್ಯಾಹ್ನ ಊಟದ ಸಮಯದಲ್ಲಿ ಮೆಡಿಕಲ್ ಕಾಲೇಜ್ ಕ್ಯಾಂಟೀನ್ ಕಟ್ಟಡಕ್ಕೆ ವಿಮಾನ ಬಡಿದಿದೆ. ಈ ದುರಂತದ ವೇಳೆ ಮೆಸ್‌ನಲ್ಲಿ ಎಷ್ಟು ಮಂದಿ ಇದ್ದರು ಎಂಬ ನಿಖರ ಮಾಹಿತಿ ಲಭ್ಯವಾಗಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!