ವಸತಿ ಪ್ರದೇಶದಲ್ಲಿ ಪತನಗೊಂಡ ವಿಮಾನ: ಟ್ರೈನಿ ಪೈಲಟ್‌ ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಖಾಸಗಿ ವಿಮಾನಯಾನ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವೊಂದು ವಸತಿ ಪ್ರದೇಶದಲ್ಲಿ ಪತನಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ಟ್ರೈನಿ ಪೈಲಟ್ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಅಮ್ರೇಲಿಯಲ್ಲಿ ನಡೆದಿದೆ

ಮಂಗಳವಾರ ಮಧ್ಯಾಹ್ನ 12:30 ರ ಸುಮಾರಿಗೆ ಅಮ್ರೇಲಿ ಪಟ್ಟಣದ ಗಿರಿಯಾ ರಸ್ತೆಯ ವಸತಿ ಪ್ರದೇಶದಲ್ಲಿನ ಮರವೊಂದರ ಮೇಲೆ ಬಿದ್ದ ವಿಮಾನ ತದನಂತರ ನೆಲಕ್ಕೆ ಬಿದ್ದು ಪತನಗೊಡಿದೆ. ಇದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನೆಯಲ್ಲಿ ಟ್ರೈನಿ ಪೈಲಟ್ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಅಮ್ರೇಲಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಖಾರತ್ ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ ಪೈಲಟ್ ಒಬ್ಬರೇ ವಿಮಾನದಲ್ಲಿದ್ದರು ಎನ್ನಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!