May 6, 2026
Wednesday, May 6, 2026
spot_img

ಟೇಕಾಫ್ ಆದ ಕೆಲವೇ ನಿಮಿಷದಲ್ಲಿ ಕಟ್ಟಡಕ್ಕೆ ಡಿಕ್ಕಿ ಹೊಡೆದ ವಿಮಾನ: ಪೈಲಟ್ ಸೇರಿ ಮೂವರ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬ್ರೆಜಿಲ್‌ನ ಬೆಲೊ ಹೊರಿಜಾಂಟೆ ನಗರದಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಪೈಲಟ್ ಸೇರಿದಂತೆ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಣ್ಣ ವಿಮಾನವೊಂದು ವಸತಿ ಕಟ್ಟಡಕ್ಕೆ ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ದುರಂತ ಸಂಭವಿಸಿದೆ.

ಅಪಘಾತಕ್ಕೀಡಾದ ವಿಮಾನವು ನಗರ ಕೇಂದ್ರದಿಂದ ಸುಮಾರು 8 ಕಿಲೋಮೀಟರ್ ದೂರದಲ್ಲಿರುವ ಪಂಪುಲ್ಹಾ ವಿಮಾನ ನಿಲ್ದಾಣದಿಂದ ಸಾವೊ ಪಾಲೊ ನಗರಕ್ಕೆ ತೆರಳಲು ಸಜ್ಜಾಗಿತ್ತು. ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ತೊಂದರೆಯಿಂದಾಗಿ ವಿಮಾನವು ನಿಯಂತ್ರಣ ತಪ್ಪಿ ಸಮೀಪದ ಜನವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ದುರಂತದ ಸಮಯದಲ್ಲಿ ವಿಮಾನದಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಅಪಘಾತದ ತೀವ್ರತೆಗೆ ವಿಮಾನದಲ್ಲಿದ್ದ ಪೈಲಟ್ ಹಾಗೂ ಸಹ-ಪೈಲಟ್ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ವಿಮಾನವು ಕಟ್ಟಡಕ್ಕೆ ಡಿಕ್ಕಿ ಹೊಡೆದು ಪತನಗೊಳ್ಳುವ ಭೀಕರ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ. ಸ್ಥಳೀಯ ರಕ್ಷಣಾ ಪಡೆಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !