ಯುಎಸ್ ಏರ್ ಶೋನಲ್ಲಿ ಗಾಳಿಯಲ್ಲಿ ಡಿಕ್ಕಿ ಹೊಡೆದ ವಿಮಾನಗಳು: 6 ಜನರ ಸಾವಿನ ಶಂಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಶನಿವಾರ ಅಮೆರಿಕದ ಡಲ್ಲಾಸ್‌ನಲ್ಲಿ ನಡೆದ ವೈಮಾನಿಕ ಪ್ರದರ್ಶನದಲ್ಲಿ ಎರಡು ವಿಶ್ವ ಸಮರ-2ರ ಸಮಯದ ವಿಮಾನಗಳು ಗಾಳಿಯಲ್ಲಿಯೇ ಡಿಕ್ಕಿ ಹೊಡೆದ ಪರಿಣಾಮ 6 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

ಪ್ರದರ್ಶನದ ಸಮಯದಲ್ಲಿ ಗಾಳಿಯಲ್ಲಿಯೇ ಬೋಯಿಂಗ್ ಬಿ -17 ಫ್ಲೈಯಿಂಗ್ ಫೋರ್ಟ್ರೆಸ್ ಮತ್ತು ಬೆಲ್ ಪಿ -63 ಕಿಂಗ್‌ಕೋಬ್ರಾ ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದಿವೆ. ಈ ಭೀಕರ ಅಫಘಾತದ ದೃಶ್ಯಗಳು ಕ್ಯಾಮರಾ ಕಣ್ಣಲ್ಲಿ ಸರೆಯಾಗಿವೆ. ಅಧಿಕಾರಿಗಳು ಸಾವುನೋವುಗಳನ್ನು ದೃಢಪಡಿಸಿಲ್ಲ ಆದರೆ ವರದಿಗಳ ಪ್ರಕಾರ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

ಅಪಘಾತದ ಬಗ್ಗೆ ತುರ್ತು ಸಿಬ್ಬಂದಿ ಪ್ರತಿಕ್ರಿಯಿಸುತ್ತಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!