ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಹೊಸ ಹೊಸ ಯೋಜನೆಗಳ ಘೋಷಣೆಯಾಗುತ್ತಿದೆಯೇ ಹೊರತು ಯಾವುದೂ ಕಾರ್ಯರೂಪಕ್ಕೆ ಬರುತಿಲ್ಲ, ಇದರಿಂದ ಬ್ರ್ಯಾಂಡ್ ಬೆಂಗಳೂರುಗೆ ಧಕ್ಕೆಯಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ.
ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್, ಭಗವಂತನೇ ಬಂದರೂ ಎರಡು ಮೂರು ವರ್ಷಗಳ ಕಾಲ ಬೆಂಗಳೂರನ್ನು ಬದಲಾಯಿಸುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ, ಒಂದು ಗುಂಡಿಯನ್ನು ಮುಚ್ಚೋಕು ಈ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಆದರೆ ಟನೆಲ್ ರೋಡ್ಗಳನ್ನು ಮಾಡುವ ಬಗ್ಗೆ ಮಾತಾಡುತ್ತಾರೆ ಎಂದು ಟಾಂಗ್ ಕೊಟ್ಟಿದ್ದಾರೆ.