ಸರ್ಕಾರಿ ಶಾಲೆಗಳ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ

ಹೊಸ ದಿಗಂತ ವರದಿ, ಅಂಕೋಲಾ:

ತಾಲೂಕು ಆಡಳಿತ ಅಂಕೋಲಾ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಅಂಕೋಲಾ ಇವರ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಯೋಗದಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ತಾಲೂಕಿನ ಸರ್ಕಾರಿ ಶಾಲೆಗಳ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಗುವುದು ಎಂದು ತಹಶೀಲ್ಧಾರ ಉದಯ ಕುಂಬಾರ ಅವರು ತಿಳಿಸಿದರು.
ತಹಶೀಲ್ಧಾರರ ಕಾರ್ಯಾಲಯದಲ್ಲಿ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು ಸಹಾಯಕ ಆಯುಕ್ತ ರಾಹುಲ್ ರತನ್ ಪಾಂಡೆ ಅವರ ಮಾರ್ಗದರ್ಶನದಲ್ಲಿ ತಾಲೂಕಿನ 152 ಪ್ರಾಥಮಿಕ ಮತ್ತು 11 ಪ್ರೌಢ ಶಾಲೆಗಳಲ್ಲಿ ಅರಣ್ಯ ಇಲಾಖೆ ನರ್ಸರಿಗಳಿಂದ ಪೂರೈಸಲಾಗಿರುವ
ವಿವಿಧ ಬಗೆಯ 1024 ಗಿಡಗಳನ್ನು ನೆಡುವ ಮೂಲಕ ಹಸೀರಿಕರಣದ ಸಂಕಲ್ಪ ತೊಡಲಾಗುವುದು ಎಂದ ಅವರು ಕಾರ್ಯಕ್ರಮದ ಯಶಸ್ಸಿಗಾಗಿ ತಾಲೂಕು ಮಟ್ಟದ ಅಧಿಕಾರಿಗಳ ತಂಡ ರಚಿಸಿ ಜವಾಬ್ದಾರಿಗಳನ್ನು ನೀಡಲಾಗಿದೆ ಎಂದರು.
ಅರಣ್ಯ ಇಲಾಖೆಯ ಹಾರವಾಡ, ಗುಂಡಬಾಳ, ಅಗಸೂರು, ಮತ್ತು ಮೂಲೆಮನೆ ನರ್ಸರಿಗಳಿಂದ ಗಿಡಗಳನ್ನು ಪೂರೈಸಲಾಗಿದ್ದು ತಾಲೂಕಿನಲ್ಲಿ ಒಟ್ಟು 13 ಕ್ಲಸ್ಟರ್ ಗಳನ್ನು ರಚಿಸಿ ಶಾಲೆಗಳಿಗೆ ಗಿಡಗಳನ್ನು ಸಾಗಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಲಕ್ಷ್ಮೀ ಪಾಟೀಲ್ ಮಾತನಾಡಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡಗಳನ್ನು ನೆಡುವ ಕಾರ್ಯಕ್ರಮಗಳಿಗೆ ತಾಲೂಕಿನ 163 ಸರ್ಕಾರಿ ಶಾಲೆಗಳನ್ನು ಗುರುತಿಸಲಾಗಿದ್ದು ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯವರ ಸಹಕಾರದಲ್ಲಿ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಸಹಾಯಕ ಅರಣ್ಯ ಸಂರಕ್ಷಣಾ ಧಿಕಾರಿ ಕೃಷ್ಣ ಅಣ್ಣಯ್ಯ ಗೌಡ, ವಲಯ ಅರಣ್ಯಾಧಿಕಾರಿ ಗಣಪತಿ ನಾಯಕ, ಉಪ ತಹಶೀಲ್ಧಾರ ಸುರೇಶ ಹರಿಕಂತ್ರ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!