Wednesday, March 29, 2023

Latest Posts

ಪ್ಲಾಸ್ಟಿಕ್‌ ಚೀಲದಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಹೊಸ ದಿಗಂತ ವರದಿ, ಮಡಿಕೇರಿ:

ಪ್ಲಾಸ್ಟಿಕ್‌ ಚೀಲದಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಡಿಕೇರಿ ತಾಲೂಕಿನ ಮರಗೋಡುವಿನಲ್ಲಿ ನಡೆದಿದೆ.

ಕತ್ತಲೆಕಾಡು ನಿವಾಸಿ ಜಾನ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಗೋಹತ್ಯೆ, ಗೋಮಾಂಸ ಮಾರಾಟ, ಅಕ್ರಮ ಗೋಸಾಗಾಟಗಳನ್ನು ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆ ವಿಫಲವಾಗುತ್ತಿರುವುದರಿಂದ ಜನ ಸಾಮಾನ್ಯರು ಪೊಲೀಸ್ ಇಲಾಖೆಯನ್ನು ಸಂಶಯದಿಂದ ನೋಡುವಂತಾಗಿದೆ. ಪೊಲೀಸ್ ಇಲಾಖೆಯ ಈ ರೀತಿಯ ನಿರ್ಲಕ್ಷ್ಯದ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರಕಾರಗಳಿಗೆ ಅಂಕಿ ಅಂಶಗಳ ಸಹಿತ ದೂರನ್ನು ಸಲ್ಲಿಸಲಾಗುವುದೆಂದು ಹಿಂದು ಜಾಗರಣ ವೇದಿಕೆಯ ಕೊಡಗು ಜಿಲ್ಲಾ ಸಂಚಾಲಕ್ ಕುಕ್ಕೇರ ಅಜಿತ್, ಮಡಿಕೇರಿ ತಾಲೂಕು ಸಂಚಾಲಕ್ ಎಂ.ಬೆಳ್ಯಪ್ಪ ಮಾಹಿತಿ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!