ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೆನ್ನೈನ ಚೆಪಾಕ್ ಮೈದಾನದಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ಎಸ್ಆರ್ಹೆಚ್ ತಂಡ ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.5 ಓವರ್ಗಳಲ್ಲಿ 154 ರನ್ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಸನ್ರೈಸರ್ಸ್ ತಂಡ 18.4 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 155 ರನ್ಗಳಿಸಿ ಐದು ವಿಕೆಟ್ಗಳ ಜಯ ಸಾಧಿಸಿದೆ.
ಎಂ.ಎಸ್.ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ಗೆ ಮತ್ತೊಂದು ಸೋಲಾಗಿದೆ. ನಿನ್ನೆ ಪಂದ್ಯ ಸೋಲುವ ಮೂಲಕ ಈ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ದಾಖಲೆ ಬರೆದಿದೆ.
ಇಲ್ಲಿಯವರೆಗೆ ಒಟ್ಟು 9 ಪಂದ್ಯಗಳನ್ನು ಆಡಿರುವ ಚೆನ್ನೈ ಸೂಪರ್ ಕಿಂಗ್ಸ್, 7 ರಲ್ಲಿ ಸೋತು ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಈ ಮೂಲಕ ಚೆನ್ನೈ ತಂಡದ ಪ್ಲೇ ಆಫ್ ಕನಸು ಭಗ್ನಗೊಂಡಿದೆ.
ಆದರೂ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇನ್ನೂ 5 ಪಂದ್ಯಗಳಿವೆ. ಈ ಐದು ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ ಒಟ್ಟು 14 ಅಂಕಗಳನ್ನು ಪಡೆದು ಪ್ಲೇಆಫ್ಗೆ ಎಂಟ್ರಿ ಕೊಡಬಹುದು. ಒಂದು ವೇಳೆ ಅಂಕ ಪಟ್ಟಿಯಲ್ಲಿ ಅಗ್ರ-4 ರಲ್ಲಿ ಕಾಣಿಸಿಕೊಳ್ಳುವ ತಂಡಗಳು 16 ಅಂಕಗಳನ್ನು ಕಲೆಹಾಕಿದರೆ ಸಿಎಸ್ಕೆ ಪ್ಲೇಆಫ್ ರೇಸ್ನಿಂದ ಹೊರಬೀಳುವುದು ಖಚಿತ.