ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾಗರಣೆ ಮಾಡಿರ್ತೀವಿ, ಶಿವರಾತ್ರಿ ಮರುದಿನ ಹಿಂದು ಉದ್ಯೋಗಿಗಳಿಗೆ ರಜೆ ಕೊಡಿ ಎಂದು ಹಿಂದು ಸಮುದಾಯದ ಮುಖಂಡರು ಬೇಡಿಕೆಯೊಂದನ್ನು ಸರ್ಕಾರದ ಮುಂದಿಟ್ಟಿದ್ದಾರೆ.
ರಂಜನ್‌ಗಾಗಿ ಆ ಸಮುದಾಯದ ಉದ್ಯೋಗಿಗಳಿಗೆ ನಿತ್ಯ ಒಂದು ಗಂಟೆ ಮುಂಚಿತವಾಗಿ ಕಚೇರಿಯಿಂದ ತೆರಳಲು ಅನುಮತಿ ನೀಡುವಂತೆ ಸಿಎಂಗೆ ಪತ್ರ ಬರೆದ ಬೆನ್ನಲ್ಲೆ ಇದೀಗ ಹಿಂದುಗಳು ಜಾಗರಣೆ ಮಾಡಿರುತ್ತಾರೆ. ಮರುದಿನ ಕೆಲಸ ಮಾಡಲು ಕಷ್ಟವಾಗುತ್ತದೆ. ಹಾಗಾಗಿ ಹಿಂದೂ ಉದ್ಯೋಗಿಗಳಿಗೆ ರಜೆ ನೀಡಿ ಎಂದು ಪತ್ರ ಬರೆಯಲಾಗಿದೆ.
ತೆಲಂಗಾಣ, ಆಂಧ್ರದಲ್ಲಿ ಸರ್ಕಾರ ಸ್ವಯಂಪ್ರೇರಿತವಾಗಿ ಮುಸ್ಲಿಂ ಸಮುದಾಯದ ಉದ್ಯೋಗಿಗಳಿಗೆ ರಂಜನ್ ಸಮಯದಲ್ಲಿ ನಿತ್ಯ ಒಂದು ಗಂಟೆ ವಿನಾಯಿತಿ ಕೊಟ್ಟಿದೆ. ಅದರಂತೆ ರಾಜ್ಯದಲ್ಲೂ ಈ ರೀತಿಯ ಅವಕಾಶ ಮಾಡಬೇಕೆಂದು ಕೆಪಿಸಿಸಿ ಉಪಾಧ್ಯಕ್ಷ ಎಆರ್‌ಎಂ ಹುಸೇನ್ ಹಾಗೂ ಸೈಯದ್ ಅಹಮ್ಮದ್, ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದರು. ಈ ಸಂಬಂಧ ಆರಂಭದಲ್ಲಿ ಕಿಡಿಕಾರಿದ್ದ ಹಿಂದೂ ಸಂಘಟನೆಗಳು, ಬಳಿಕ ಅವರದ್ದೇ ದಾರಿಯಲ್ಲಿ ಹೋಗಿ ಮತ್ತೆ ಸರ್ಕಾರದ ಮುಂದೆ ಹಿಂದೂಗಳಿಗೆ ಹಬ್ಬದ ಸಂದರ್ಭಗಳಲ್ಲಿ ಹೆಚ್ಚುವರಿ ರಜೆ ನೀಡಬೇಕೆಂದು ಮನವಿ ಮಾಡಿದ್ದಾರೆ.